ಟೀಮ್ ಇಂಡಿಯಾ-ನ್ಯೂಜಿಲೆಂಡ್ ನಡುವಿನ T20 ಸರಣಿಯ 3ನೇ ಹಾಗೂ ಕೊನೆಯ ಪಂದ್ಯ ಇಂದು ನಡೆಯಲಿದೆ. ಇಂದಿನ ಪಂದ್ಯಕ್ಕೆ ನೆಪಿಯರ್ನ ಮೆಕ್ಲೀನ್ ಪಾರ್ಕ್ ಸ್ಟೇಡಿಯಂ ಸಾಕ್ಷಿಯಾಗಲಿದೆ.
ಮೊದಲ ಪಂದ್ಯ ಮಳೆಯಿಂದ ರದ್ದಾಗಿತ್ತು. ಎರಡನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪಡೆ ಭರ್ಜರಿ ಜಯ ಸಾಧಿಸಿತ್ತು. ಇದರಿಂದ ಇಂದಿನ ಪಂದ್ಯ ನ್ಯೂಜಿಲೆಂಡ್ ಪಾಲಿಗೆ ಡು ಆರ್ ಡೈ ಆಗಿದೆ. ಮತ್ತೊಂದೆಡೆ ಟೀಮ್ ಇಂಡಿಯಾ ಈ ಪಂದ್ಯವನ್ನೂ ಗೆದ್ದು, ಸರಣಿ ಗೆಲ್ಲುವ ವಿಶ್ವಾಸದಲ್ಲಿದೆ.
ಎರಡನೇ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದರು. ಇವತ್ತಿನ ಪಂದ್ಯದಲ್ಲೂ ಸೂರ್ಯ ಆರ್ಭಟಿಸುವ ಹುಮ್ಮಸ್ಸಿನಲ್ಲಿದ್ದಾರೆ. ಮತ್ತೊಂದು ಕಡೆ, ಟೀಂ ಇಂಡಿಯಾ ಬೇರೆ ಯಾವುದೇ ಬ್ಯಾಟ್ಸ್ಮನ್ಗಳ ನಿರೀಕ್ಷಿತ ಪ್ರದರ್ಶನ ನೀಡದಿರೋದು ಆತಂಕಕ್ಕೂ ಕಾರಣವಾಗಿದೆ. ಒಂದು ವೇಳೆ ಇವತ್ತಿನ ಪಂದ್ಯವನ್ನ ಗೆದ್ದರೆ, ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯಗೆ ಹೊಸ ಮೈಲೇಜ್ ಸಿಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post