ಚಿಕ್ಕಮಗಳೂರು: ಸುಮಾರು 50 ವರ್ಷಗಳ ಬಳಿಕ ಜನಸಂಖ್ಯೆ ಆಧಾರದ ಮೇಲೆ ಹಿಂದುಳಿದವರಿಗೆ ಮೀಸಲಾತಿ ಹೆಚ್ಚಿಸಿದ ಬಿಜೆಪಿ ಸರ್ಕಾರದ ನಡೆಯನ್ನ ಮೆಚ್ಚಿ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮಹಲ್ಗೋಡು ಗ್ರಾಮದಲ್ಲಿ ಗ್ರಾಮಕ್ಕೆ ಗ್ರಾಮವೇ ಬಿಜೆಪಿ ಪಕ್ಷವನ್ನ ಸೇರಿದೆ.
ಗ್ರಾಮದ 300ಕ್ಕೂ ಅಧಿಕ ಪುರುಷರು ಹಾಗೂ ಮಹಿಳೆಯರು ಬಿಜೆಪಿಗೆ ಸೇರಿದ್ದಾರೆ. ರಾಜ್ಯ ಸರ್ಕಾರ ಮೀಸಲಾತಿ ಹೆಚ್ಚಿಸಿದ್ದರಿಂದಲೇ ಬಿಜೆಪಿ ಸೇರಿದ್ದೇವೆ ಎಂದು ಘೋಷಣೆ ಕೂಗಿದ್ದಾರೆ. ಮಹಲ್ಗೋಡು ಗ್ರಾಮದಲ್ಲಿ ಬಹುತೇಕ ಹಿಂದುಳಿದ ಜನಾಂಗಕ್ಕೆ ಸೇರಿದ ಕುಟುಂಬಗಳು, ಮತದಾರರಿದ್ದಾರೆ. ಎಲ್ಲರೂ ಸ್ವಯಂಪ್ರೇರಿತರಾಗಿ ಬಿಜೆಪಿ ಸೇರಿದ್ದಾರೆ. ಅವರೇ ಶಾಮಿಯಾನ ತಂದು, ಹಾಕಿ ಅವರೇ ಕಾರ್ಯಕ್ರಮ ಮಾಡಿ ಬಿಜೆಪಿ ಸೇರಿಕೊಂಡಿದ್ದು, ಮಾಜಿ ಸಚಿವ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಎಲ್ಲರನ್ನೂ ಪಕ್ಷಕ್ಕೆ ಸ್ವಾಗತಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post