ಚೆನ್ನೈ: ಬಹುಭಾಷಾ ನಟ, ಮಕ್ಕಳ್ ನೀಧಿ ಮೈಯಂ (ಎಂಎನ್ಎಂ) ಪಕ್ಷದ ಸಂಸ್ಥಾಪಕರಾಗಿರುವ ಕಮಲ್ ಹಾಸನ್ (68) ತೀವ್ರ ಜ್ವರದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ರಾತ್ರಿ ಚೆನ್ನೈನ ಶ್ರೀರಾಮಚಂದ್ರ ಮೆಡಿಕಲ್ ಸೆಂಟರ್ ಆಸ್ಪತ್ರೆಗೆ ದಾಖಲಾಗಿ ಕಮಲ್ ಚಿಕಿತ್ಸೆ ಪಡೆದುಕೊಂಡಿದ್ದು, ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಅವರಿಗೆ ವೈದ್ಯರು ಎರಡು ದಿನ ವಿಶ್ರಾಂತಿ ಪಡೆದುಕೊಳ್ಳುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಆದರೆ ಈ ಕುರಿತು ಆಸ್ಪತ್ರೆಯ ಆಡಳಿತ ಮಂಡಳಿ ಯಾವುದೇ ಅಧಿಕೃತ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿಲ್ಲ.
ಹೈದರಾಬಾದ್ನಲ್ಲಿ ನಡೆಯುತ್ತಿದ್ದ ಬಿಗ್ ಬಾಸ್ ಸೀಸನ್ 6 ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ಸಂದರ್ಭದಲ್ಲಿ ತೀವ್ರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೈದರಾಬಾದ್ನಿಂದ ಚೆನ್ನೈಗೆ ವಾಪಸ್ ಆಗಿದ್ದರು. ಚೆನ್ನೈನಲ್ಲಿ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡ ಬಳಿಕ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ ಕಮಲ್ ಹಾಸನ್ ಅವರು ಇಂಡಿಯನ್-2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇನ್ನು, ತಮ್ಮ ನೆಚ್ಚಿನ ನಟ ಆಸ್ಪತ್ರೆಗೆ ದಾಖಲಾದ ಸುದ್ದಿ ಕೇಳಿ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಆದರೆ ಅವರು ಸಾಮಾನ್ಯ ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ಕಮಲ್ ಅವರು, ಖ್ಯಾತ ನಿರ್ದೇಶಕ ವಿಶ್ವನಾಥ್ ಅವರನ್ನು ಹೈದರಾಬಾದ್ನಲ್ಲಿ ಭೇಟಿಯಾಗಿದ್ದರು. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post