ಬಾಲಿವುಡ್‌ನ ಕ್ಯೂಟ್ ಜೋಡಿ ರಣಬೀರ್ ಮತ್ತು ಆಲಿಯಾ ಭಟ್ ತಮ್ಮ ಮುದ್ದಾದ ಹೆಣ್ಣು ಮಗುವಿಗೆ ನಾಮಕರಣ ಮಾಡಿದ್ದಾರೆ. ಮಗಳಿಗೆ ʻರಾಹಾʼ ಎಂದು ಹೆಸರಿಟ್ಟಿದ್ದಾರೆ. ಮಗಳ ಹೆಸರನ್ನು ಆಲಿಯಾ ಭಟ್ ಇನ್‌ಸ್ಟಾಗ್ರಾಂ ಮೂಲಕ ಬಹಿರಂಗ ಪಡಿಸಿದ್ದು, ರಾಹಾ ಹಲವು ಅರ್ಥಗಳನ್ನು ಹೊಂದಿದೆ.
ರಾಹಾ ಎಂದರೆ ದೈವಿಕ ಮಾರ್ಗ ಎಂದರ್ಥ. ಸ್ವಾಹಿಲಿ ಭಾಷೆಯಲ್ಲಿ ಸಂತೋಷ. ಇನ್ನು ಸಂಸ್ಕೃತದಲ್ಲಿ ಕುಲ ಎಂದರ್ಥ. ರಾಹಾಳನ್ನು ಕೈಯಲ್ಲಿ ಹಿಡಿದ ದಿನದಿಂದ ನಾವು ಸಂತೋಷ, ಶಾಂತಿ ಅನುಭವಿಸುತ್ತಿದ್ದೇವೆ. ನಮ್ಮ ಕುಟುಂಬವನ್ನು ಸಂತೋಷವಾಗಿರಿಸಿದ ರಾಹಾಳಿಗೆ ಧನ್ಯವಾದ. ನಮ್ಮ ಜೀವನ ಈಗಷ್ಟೇ ಆರಂಭವಾದಂತಿದೆ ಎಂದು ಆಲಿಯಾ ಭಟ್ ಖುಷಿ ಹಂಚಿಕೊಂಡಿದ್ದಾರೆ.
View this post on Instagram
ಆಲಿಯಾ ಪೋಸ್ಟ್ಗೆ ಪ್ರತಿಕ್ರಿಯೆ ನೀಡಿರೋ ಸಿನಿಮಾ ರಂಗದ ಗಣ್ಯರು, ನೆಟ್ಟಿಗರು, ಅಭಿಮಾನಿಗಳು, ಮಗುವಿನ ಹೆಸರು ತುಂಬಾ ಚೆನ್ನಾಗಿದೆ. ಆದರೆ ನೀವು ಮಗುವನ್ನು ತೋರಿಸಿಲ್ಲ ಎಂದು ಬೇಸರಗೊಂಡಿದ್ದಾರೆ. ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದ ಆಲಿಯಾ, ರಣಬೀರ್ ಕಳೆದ ಏಪ್ರಿಲ್ನಲ್ಲಿ ವೈವಾಹಿಕ ಬಂಧನಕ್ಕೆ ಕಾಲಿಟ್ಟಿದ್ದರು. ನವೆಂಬರ್ 6ರಂದು ಆಲಿಯಾ ಮಗುವಿಗೆ ಜನ್ಮ ನೀಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post