ಬೆಂಗಳೂರು: ಕೊಲೆ ಕೇಸ್ನಲ್ಲಿ ಆರೋಪಿಯಾಗಿದ್ದ ರೌಡಿ ಶೀಟರ್ ಕಾಲಿಗೆ ಪೊಲೀಸ್ ಇನ್ಸ್ಪೆಕ್ಟರ್ ಗುಂಡು ಹೊಡೆದಿದ್ದಾರೆ. ರಾಜ ಅಲಿಯಾಸ್ ರಾಜನ್ ಗುಂಡೇಟು ತಿಂದ ರೌಡಿಶೀಟರ್.
ಮಾದನಾಯಕನಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್ ರಾಜನ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮಾದವಾರದ ನವಿಲು ಲೇಔಟ್ನಲ್ಲಿ ಶೂಟೌಟ್ ಮಾಡಲಾಗಿದೆ.
ಕೊಲೆ ಪ್ರಕರಣ ಸೇರಿ ಒಟ್ಟು 6 ಕೇಸ್ಗಳು ರಾಜನ್ ಮೇಲೆ ಇದ್ದವು. ಅಲ್ಲದೇ ಪೊಲೀಸರ ಮೇಲೂ ಹಲ್ಲೆ ನಡೆಸಿದ್ದ ಆರೋಪ ರಾಜನ್ ಮೇಲಿತ್ತು. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಆತನನ್ನ ಬಂಧಿಸಲು ಪೊಲೀಸರು ಹೋಗಿದ್ದರು. ಆಗ ಪೊಲೀಸರ ಮೇಲೆಯೇ ದಾಳಿ ಮಾಡಲು ಮುಂದಾಗಿದ್ದ ಎನ್ನಲಾಗಿದೆ. ಹೀಗಾಗಿ ಇನ್ಸ್ಪೆಕ್ಟರ್ ಮಂಜುನಾಥ್, ರೌಡಿಶೀಟರ್ ಮೇಲೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಸದ್ಯ ಬಂಧಿತ ರೌಡಿಶೀಟರ್ನನ್ನ ನಗರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಚೇತರಿಸಿಕೊಂಡ ಬಳಿಕ ಹೆಚ್ಚಿನ ತನಿಖೆಯನ್ನ ಪೊಲೀಸರು ಮುಂದುವರಿಸಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post