ಬೆಳಗಾವಿ: ಜಮೀನು ಖಾತೆ ಬದಲಾವಣೆ ಮಾಡಿಕೊಡಲು ಲಂಚ ಪಡೆಯುವಾಗ ರೆಡ್ಹ್ಯಾಂಡ್ ಆಗಿ ಕಿತ್ತೂರು ತಹಶೀಲ್ದಾರ್ ಮತ್ತು ಇನ್ನೊಬ್ಬ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕಿತ್ತೂರು ತಹಶೀಲ್ದಾರ್ ಸೋಮಲಿಂಗಪ್ಪ ಹಲಗಿ, ಕೇಸ್ ವರ್ಕರ್ ಪ್ರಸನ್ ಜಿ. ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು. ಕಿತ್ತೂರು ಪಟ್ಟಣದ ಹೊರವಲಯದಲ್ಲಿರೋ ತಹಶೀಲ್ದಾರ್ ನಿವಾಸದಲ್ಲಿ ಹಣ ಪಡೆಯುವಾಗ ಲೋಕಾಯುಕ್ತರು ದಾಳಿ ಮಾಡಿದ್ದಾರೆ.
ಜಮೀನು ಖಾತೆ ಬದಲಾವಣೆ ಮಾಡಿಕೊಡಲು 5 ಲಕ್ಷ ರೂ. ಲಂಚಕ್ಕೆ ತಹಶೀಲ್ದಾರ್ ಸೋಮಲಿಂಗಪ್ಪ ಬೇಡಿಕೆ ಇಟ್ಟಿದ್ದರು ಎಂದು ಹೇಳಲಾಗಿದೆ. ಹೀಗಾಗಿ ಮುಂಗಡವಾಗಿ 2 ಲಕ್ಷ ರೂ. ತೆಗೆದುಕೊಳ್ಳುವಾಗ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿದ್ದಾರೆ.
ಮೊದಲೇ ಲೋಕಾಯುಕ್ತಕ್ಕೆ ದೂರು ನೀಡಿದ್ದ ಬಾಪುಸಾಹೇಬ್
ತಾಲೂಕಿನ ಕೋದಾನಪು ಗ್ರಾಮದ ಬಾಪುಸಾಹೇಬ್ ಇನಾಮದಾರ್ ಎಂಬುವರ 10 ಎಕರೆ ಜಮೀನು ಖಾತೆ ಬದಲಾವಣೆಗಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ಖಾತೆ ಬದಲಾವಣೆಗಾಗಿ 5 ಲಕ್ಷ ರೂಪಾಯಿಗಳ ಲಂಚ ಕೊಡುವಂತೆ ಅಧಿಕಾರಿಗಳು ಬೇಡಿಕೆ ಇಟ್ಟಿದ್ದರು.
ಈ ಕುರಿತು ಬಾಪುಸಾಹೇಬ್ ಪುತ್ರ ರಾಜೇಂದ್ರ ಅನ್ನೋರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ದೂರನ್ನಾಧರಿಸಿ ಲೋಕಾಯುಕ್ತ ಎಸ್ಪಿ ಯಶೋಧಾ ವಂಟಗೂಡಿ ನೇತೃತ್ವದಲ್ಲಿ ಎಂಟು ಅಧಿಕಾರಿಗಳು ರೇಡ್ ಮಾಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post