ಮೈಸೂರು: ನಂಜನಗೂಡಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡುವ ಹಿನ್ನೆಲೆಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ತಾರತುರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಡೆಸಿದೆ.
ಇಂದು ನಂಜನಗೂಡಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಅಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ-ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯ NH 150A ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನ ಅಧಿಕಾರಿಗಳು ತರಾತುರಿಯಲ್ಲಿ ಮುಚ್ಚಿದ್ದಾರೆ. ಸಿಎಂ ಬೊಮ್ಮಾಯಿ ಬರುವುದು ಒಂದು ಗಂಟೆ ಮುನ್ನವೇ ಅಧಿಕಾರಿಗಳು ಗುಂಡಿ ಮುಚ್ಚೋ ಕಾರ್ಯಕ್ಕೆ ಮುಂದಾಗಿದ್ದಾರೆ.
ನಂಜನಗೂಡು ಶ್ರೀಕಂಠೇಶ್ವರ ದೇವಾಲಯ ಅಭಿವೃದ್ಧಿ ಕಾಮಗಾರಿ ಮತ್ತು ಹೆಡಿಯಾಲ ಏತ ನೀರಾವರಿ, ನದಿ ಮೂಲದಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಇಷ್ಟು ದಿನಗಳಿಂದ ರಸ್ತೆ ಗುಂಡಿ ಬಿದ್ದಿದ್ದರು ತಲೆಕೇಡಿಸಿಕೊಳ್ಳದ ಅಧಿಕಾರಿಗಳು, ಸಿಎಂ ಆಗಮಿಸೋ ಒಂದೆರೆಡು ಗಂಟೆ ಮುನ್ನ ರಸ್ತೆ ಗುಂಡಿ ಮುಚ್ಚುವ ಕಾರ್ಯ ಮಾಡಿದ್ದಾರೆ ಅಂತ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post