ಶ್ರೀಲಂಕಾ ವಿರುದ್ಧದ ಎರಡನೇ ODI ಪಂದ್ಯವು ಮಳೆಯಿಂದಾಗಿ ರದ್ದಾಗಿದ್ದು, ಅಫ್ಘಾನಿಸ್ತಾನ್ ತಂಡಕ್ಕೆ ಗುಡ್ನ್ಯೂಸ್ ಸಿಕ್ಕಿದೆ. ಲಂಕಾ ವಿರುದ್ಧದ ಪಂದ್ಯದ ಬೆನ್ನಲೇ 2023ರ ವಿಶ್ವಕಪ್‌ಗೆ ಅಫ್ಘಾನಿಸ್ತಾನ ಅರ್ಹತೆ ಪಡೆದುಕೊಂಡಿದೆ.
ಈ ಮೂಲಕ 2023ರ ವಿಶ್ವಕಪ್‌ನಲ್ಲಿ ಶ್ರೀಲಂಕಾ ನೇರವಾಗಿ ಅರ್ಹತೆ ಪಡೆಯೋದು ಕಷ್ಟಕರವಾಗಿದೆ. ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯ ರದ್ದಾದ ಕಾರಣ, ಅಫ್ಘಾನಿಸ್ತಾನ ತಂಡವು 5 ಅಂಕಗಳನ್ನು ಪಡೆದುಕೊಂಡಿದೆ. ಇದರಿಂದಾಗಿ ಆಫ್ಘಾನ್ ಪಾಯಿಂಟ್ ಪಟ್ಟಿಯಲ್ಲಿ 7ನೇ ಸ್ಥಾನವನ್ನು ಪಡೆದು ನೇರವಾಗಿ ವಿಶ್ವಕಪ್‌ಗೆ ಅರ್ಹತೆ ಪಡೆದಿದೆ.
ಮತ್ತೊಂದೆಡೆ ಲಂಕಾ ತಂಡವು ಪಾಯಿಂಟ್ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಕೇವಲ 67 ಅಂಕಗಳನ್ನು ಹೊಂದಿದ್ದು, ಶ್ರೀಲಂಕಾ ವಿಶ್ವಕಪ್‌ಗೆ ನೇರವಾಗಿ ಅರ್ಹತೆ ಪಡೆಯಬೇಕಾದರೆ ಉಳಿದ 4 ಪಂದ್ಯಗಳನ್ನು ಗೆಲ್ಲಲೇಬೇಕಿದೆ. ಆದಾದ ನಂತರವೂ ಇತರೆ ತಂಡಗಳ ಸಮೀಕರಣವನ್ನು ನೋಡಲಾಗುತ್ತದೆ. ಹೀಗಾಗಿ ಲಂಕಾ ವಿಶ್ವಕಪ್‌ಗೆ ನೇರವಾಗಿ ಅರ್ಹತೆ ಪಡೆಯೋದು ಕಷ್ಟ ಎಂದೇ ಹೇಳಲಾಗುತ್ತಿದೆ.
ಇಲ್ಲಿಯವರೆಗೆ 7 ತಂಡಗಳು 2023ರ ವಿಶ್ವಕಪ್‌ಗೆ ನೇರವಾಗಿ ಅರ್ಹತೆ ಪಡೆದಿವೆ. ಇದರಲ್ಲಿ ಆತಿಥೇಯ ಭಾರತ ನೇರವಾಗಿ ಅರ್ಹತೆ ಪಡೆದಿದೆ. ಮತ್ತೊಂದೆಡೆ ಇಂಗ್ಲೆಂಡ್, ನ್ಯೂಜಿಲೆಂಡ್, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಇದೀಗ ಅಫ್ಘಾನಿಸ್ತಾನ ಅರ್ಹತೆ ಪಡೆದುಕೊಂಡಿದೆ.
ಯಾವುದೆಲ್ಲಾ ಅರ್ಹತೆ ಪಡೆದುಕೊಂಡಿಲ್ಲ..?
ವೆಸ್ಟ್ ಇಂಡೀಸ್, ಐರ್ಲೆಂಡ್, ಶ್ರೀಲಂಕಾ, ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನೆದರ್ಲ್ಯಾಂಡ್ಸ್, ಈ ತಂಡಗಳು ಅರ್ಹತೆಯನ್ನ ಪಡೆದುಕೊಂಡಿಲ್ಲ. ದಕ್ಷಿಣ ಆಫ್ರಿಕಾ ತಂಡವು ನೇರವಾಗಿ ಅರ್ಹತೆ ಪಡೆಯಲು ಪ್ರಯತ್ನಿಸುತ್ತದೆ.
The race to qualify for next year's ICC Cricket World Cup is hotting up 🔥
More 👉 https://t.co/4ZbT07WrBo pic.twitter.com/X0tfJzpN6f
— ICC (@ICC) November 28, 2022
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post