ಗೋವಾದಲ್ಲಿ ನಡೆಯುತ್ತಿರುವ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾ (IFFI)ದಲ್ಲಿ ವಿವಾದ ಸೃಷ್ಟಿಯಾಗಿದೆ. ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಇಸ್ರೇಲಿ ಚಲನಚಿತ್ರ ನಿರ್ಮಾಪಕ ಮತ್ತು IFFI ತೀರ್ಪುಗಾರರ ಮುಖ್ಯಸ್ಥ ನಾದವ್ ಲ್ಯಾಪಿಡ್, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ವಿವೇಕ್ ಅಗ್ನಿಹೋತ್ರಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಪ್ರಸ್ತಾಪಿಸಿ ‘ಕಾಶ್ಮೀರ್ ಫೈಲ್ಸ್ ಚಿತ್ರವು ಪ್ರಚಾರ’ (propaganda) ಮತ್ತು ‘ಅಶ್ಲೀಲ ಚಿತ್ರ’ (vulgar movie). ಚಲನಚಿತ್ರೋತ್ಸವದಲ್ಲಿ ಈ ಚಿತ್ರ ಪ್ರದರ್ಶನದಿಂದ ತೀರ್ಪುಗಾರರು ‘ವಿಚಲಿತರಾಗಿದ್ದಾರೆ ಮತ್ತು ಆಘಾತಕ್ಕೊಳಗಾಗಿದ್ದಾರೆ. ‘ಕಾಶ್ಮೀರ್ ಫೈಲ್ಸ್ ಚಿತ್ರವು ನಮಗೆಲ್ಲರಿಗೂ ದಿಗ್ಭ್ರಮೆ ಉಂಟುಮಾಡಿದೆ. ಮತ್ತು ಆಘಾತಕಾರಿಯಾಗಿದೆ. ಇದು ಪ್ರಚಾರ, ಅಶ್ಲೀಲ ಚಿತ್ರ, ಅಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದ ಕಲಾತ್ಮಕ, ಸ್ಪರ್ಧಾತ್ಮಕ ವಿಭಾಗಕ್ಕೆ ಇದು ಸೂಕ್ತವಲ್ಲ ಎಂದಿದ್ದಾರೆ.
ಭಾರತ ಸರ್ಕಾರವು ಭಾರತೀಯ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು (IFFA) ಆಯೋಜಿಸುತ್ತದೆ. ಈ ವರ್ಷದ IFFA ತೀರ್ಪುಗಾರರಾಗಿ ಇಸ್ರೇಲಿ ಚಲನಚಿತ್ರ ನಿರ್ಮಾಪಕ ನಾದವ್ ಲ್ಯಾಪಿಡ್ ಇದ್ದರು. ಈ ಕಾರ್ಯಕ್ರಮದಲ್ಲಿ ಭಾರತ ಸರ್ಕಾರದ ಮಂತ್ರಿಗಳೂ ಉಪಸ್ಥಿತರಿದ್ದರು. ಮಾರ್ಚ್ 11 ರಂದು ತೆರೆಕಂಡಿದ್ದ ‘ಕಾಶ್ಮೀರ್ ಫೈಲ್ಸ್’ ದೇಶದಲ್ಲಿ ಭಾರೀ ಸದ್ದು ಮಾಡಿತ್ತು. ಮಾತ್ರವಲ್ಲ ಅಷ್ಟೇ ಜನಪ್ರಿಯತೆಗಳಿಸಿತ್ತು.
#Breaking: #IFFI Jury says they were “disturbed and shocked” to see #NationalFilmAward winning #KashmirFiles, “a propoganda, vulgar movie” in the competition section of a prestigious festival— organised by the Govt of India.
🎤 Over to @vivekagnihotri sir…
@nadavlapi pic.twitter.com/ove4xO8Ftr— Navdeep Yadav (@navdeepyadav321) November 28, 2022
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post