ಮಹಾರಾಷ್ಟ್ರ: ಪಾದಚಾರಿ ಮೇಲು ಸೇತುವೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಾಳುಗಳಲ್ಲಿ ಓರ್ವ ಮಹಿಳೆ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.
ಗಾಯಾಳು ನೀಲಿಮಾ ರಂಗೇರಿ (48) ಮೃತ ಮಹಿಳೆ. ನೀಲಿಮಾ ತಲೆ ಮೇಲೆ ಮೇಲುಸೇತುವೆ ಬಿದ್ದಿದ್ದರಿಂದ ತಲೆಗೆ ಬಲವಾದ ಏಟು ಬಿದ್ದಿತ್ತು. ಹೀಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಇನ್ನು ಇಬ್ಬರು ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಚಂದ್ರಾಪುರ ಜಿಲ್ಲೆಯ ಬಾಲಹರ್ಷಾ ರೈಲ್ವೆ ನಿಲ್ದಾಣದಲ್ಲಿದ್ದ ಜನರು ಓಡಾಡುವ 60 ಅಡಿ ಎತ್ತರದ ಮೇಲು ಸೇತುವೆ ನಿನ್ನೆ ಸಂಜೆ ಕುಸಿದು ಬಿದ್ದಿತ್ತು. ಈ ವೇಳೆ 20 ಪಾದಾಚಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ರೈಲ್ವೆ ಸಿಬ್ಬಂದಿ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲು ಮಾಡಿದ್ದರು.
ಗಾಯಾಳುಗಳನ್ನ ಚಿಕಿತ್ಸೆಗಾಗಿ ಉತ್ತಮ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರು ಬೇಗ ರಿಕವರ್ ಆಗಿಬರುತ್ತಾರೆ ಎಂಬ ಬರವಸೆ ಇದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡವರಿಗೆ 1 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಚಿಕಿತ್ಸೆ ವೆಚ್ಚ ನೀಡಲಾಗುವುದು ಎಂದು ಕೇಂದ್ರ ರೇಲ್ವೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
A portion of a foot over bridge collapsed in #Maharashtra's Chandrapur.
many people injured in the accident. The accident happened at Balharshah railway station.@Central_Railway@RPFCR @RailwaySeva pic.twitter.com/bS5XN0THpb
— Indrajeet chaubey (@indrajeet8080) November 27, 2022
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post