ವಿಜಯಪುರ: ಖಾಸಗಿ ವಾಹಿನಿ ಕ್ಯಾಮೆರಾಮನ್ ತನ್ನ ಪತ್ನಿಯೊಂದಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ನಗರದ ಎಪಿಎಂಸಿ ಬಳಿಯ ಕಟ್ಟಡದಲ್ಲಿ ತಡರಾತ್ರಿ ನಡೆದಿದೆ.
ಮುದ್ದೇಬಿಹಾಳದ ಕೊಣ್ಣೂರ ಗ್ರಾಮದ ತಿಪ್ಪಣ್ಣ ಹೊಸಮನಿ (34) ಮತ್ತು ಪತ್ನಿ ಸುಜಾತಾ (30) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮೃತ ತಿಪ್ಪಣ್ಣ ಬೆಂಗಳೂರಿನ ಖಾಸಗಿ ವಾಹಿನಿಯೊಂದರಲ್ಲಿ ಕ್ಯಾಮೆರಾಮನ್ ಆಗಿ ಕೆಲಸ ಮಾಡ್ತಿದ್ದರು. ಇಬ್ಬರು ಮುದ್ದೇಬಿಹಾಳದ ಮನೆಯಲ್ಲಿರುವ ಅಕ್ಕ-ಪಕ್ಕದ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರೀತಿಸಿ ಮದುವೆಯಾಗಿದ್ದ ದಂಪತಿ..
ಅಂದಹಾಗೇ, ಮೃತ ದಂಪತಿ 22 ದಿನಗಳ ಹಿಂದಷ್ಟೇ, ಅಂದರೇ ನವೆಂಬರ್ 05 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮುದ್ದೇಬಿಹಾಳದ ಕೆಸಾಪೂರ ಗ್ರಾಮಕ್ಕೆ ಸೇರಿದ್ದ ಸುಜಾತರನ್ನು ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿ ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಆ ಬಳಿಕ ಮುದ್ದೇಬಿಹಾಳ ನಗರದಲ್ಲೇ ಮನೆ ಮಾಡಿಕೊಂಡು ದಂಪತಿ ವಾಸವಾಗಿದ್ದರು.
ತಿಪ್ಪಣ್ಣ ಕೆಲ ತಿಂಗಳ ಹಿಂದಷ್ಟೇ ಕೆಲಸ ಬಿಟ್ಟು ಊರಿಗೆ ವಾಪಸ್ ಆಗಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸ್ ಠಾಣಾದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post