ಕೊಪ್ಪಳ: ನಿವೃತ್ತ ಯೋಧನ ಮೇಲೆ ವ್ಯಕ್ತಿಯೋರ್ವ ದೊಣ್ಣೆಯಿಂದ ಮನಬಂದಂತೆ ಥಳಿಸಿರೋ ಘಟನೆ ಕೆಸೂರು ಗ್ರಾಮದ ಬಳಿ ನಡೆದಿದೆ.
ನಿವೃತ್ತ ಸೈನಿಕ ಮಹಮ್ಮದ್ ರಫೀ ಅವರು ಖಾಸಗಿ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ವಿದ್ಯುತ್ ಕಂಪನಿವೊಂದರಲ್ಲಿ ಕೆಲಸ ಮಾಡುವ ವೇಳೆ ದೋಟಿಹಾಳ ಗ್ರಾಮದ ಮೈನುದ್ದೀನ್ ಸಾಬ್ ಹಿರೇಮನಿ ಎಂಬಾತ ಏಕಾಏಕಿ ಬಂದು ನಿವೃತ್ತ ಸೈನಿಕನ ಮೇಲೆ ದೊಣ್ಣೆಯಿಂದ ಮನಬಂದಂತೆ ಥಳಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಕಾರಣವೇನು..?
ವಿದ್ಯುತ್ ಟವರ್ಗೆಂದು ಮೈನುದ್ದೀನ್ ಸಾಬ್ ಹಿರೇಮನಿ ಜಾಗ ಬಿಟ್ಟುಕೊಟ್ಟಿದ್ದರಂತೆ. ಹೀಗಾಗಿ ಹೆಚ್ಚಿನ ಹಣ ನೀಡುವಂತೆ ಕೇಳಿಕೊಂಡಿದ್ದ ಎನ್ನಲಾಗಿದೆ. ಹಣದ ವಿಚಾರದಲ್ಲಿ ತಾರತಮ್ಯ ಮಾಡಿದ್ದಾರೆ ಎಂದು ರೊಚ್ಚಿಗೆದ್ದು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಹಲ್ಲೆ ಮಾಡಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಈ ಘಟನೆ ಕುರಿತಂತೆ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post