ಕಾಂಗ್ರೆಸ್, ಜೆಡಿಎಸ್ ಭದ್ರಕೋಟೆಯಾಗಿರುವ ಸಕ್ಕರೆನಾಡು ಮಂಡ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ನಾಯಕರು ಕಸರತ್ತು ನಡೆಸ್ತಿದ್ದಾರೆ. ಸಂಸದೆ ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ ಸೇರಿ ಜಿಲ್ಲೆಯ ಹಲವು ಮುಖಂಡರು ಇವತ್ತು ಕಮಲ ಹಿಡಿದಿದ್ದಾರೆ. ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿ ಬಾವುಟ ಹಾರಿಸಿದ್ದಾರೆ.
ವೇದಿಕೆ ಮೇಲೆ ಸಚಿವ ಅಶ್ವತ್ಥ್ ನಾರಾಯಣ್, ಸಚಿವ ನಾರಾಯಣಗೌಡ, ಗೋಪಾಲಯ್ಯ, ಸಿ.ಪಿ.ಯೋಗೇಶ್ವರ್ ಸೇರಿ ಬಿಜೆಪಿಯ ದಿಗ್ಗಜ ನಾಯಕರು.. ಕಾಂಗ್ರೆಸ್‌ನಿಂದ ಉಚ್ಛಾಟಿತರಾಗಿದ್ದ ಹಾಗೂ ಮಂಡ್ಯ ಸಂಸದೆ ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಅಪಾರ ಬೆಂಬಲಿಗರೊಂದಿಗೆ ಪಕ್ಷ ಸೇರ್ಪಡೆಯಾಗಿದ್ದಾರೆ. ಇದೇ ವೇಳೆ ಕೆ.ಅರ್. ನಗರ ಹಾಗೂ ನಾಗಮಂಗಲ ಕ್ಷೇತ್ರಗಳ ಮುಖಂಡರು ಕೂಡ ಬಿಜೆಪಿ ಸೇರ್ಪಡೆ ಆಗಿದ್ದಾರೆ.
ಕಮಲ ಹಿಡಿದ ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ..!
ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಬಯಸಿರುವ ಇಂಡುವಾಳು ಸಚ್ಚಿದಾನಂದ ಇವತ್ತು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಪರ ನಿಂತಿದ್ದಕ್ಕೆ ಕಾಂಗ್ರೆಸ್‌ನಿಂದ ಉಚ್ಛಾಟನೆಯಾಗಿದ್ದರು. ಇದೀಗ ಖುದ್ದು ಸಂಸದೆ ಸುಮಲತಾ ಒಪ್ಪಿಗೆ ಪಡೆದು ಸಾವಿರಕ್ಕೂ ಹೆಚ್ಚು ಬೆಂಬಲಿಗರ ಜೊತೆ ಸಚ್ಚಿದಾನಂದ ಬಿಜೆಪಿ ಸೇರಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಬಾವುಟ ಹಾರಿಸಿದ್ದಾರೆ. ಪಕ್ಷ ಸೇರ್ಪಡೆಗೊಂಡ ನಾಯಕರಿಗೆ ಪಕ್ಷದ ಬಾವುಟ ಮತ್ತು ಶಾಲು ಹೊದಿಸಿ ಬಿಜೆಪಿ ನಾಯಕರು ಸ್ವಾಗತಿಸಿದ್ರು. ಇನ್ನು ಸಚ್ಚಿದಾನಂದ ಯಾವುದೇ ಪಕ್ಷ ಸೇರಿದ್ರೂ ಬೆಂಬಲಿಸುವುದಾಗಿ ಸುಮಲತಾ ಹೇಳಿಕೊಂಡಿದ್ದಾರಂತೆ.
ಪ್ರಧಾನಿ ನರೇಂದ್ರ ಮೋದಿಯವರ ದಕ್ಷ ಆಡಳಿತ ಹಾಗೂ ನಾಯಕತ್ವ ಒಪ್ಪಿ ಬಿಜೆಪಿ ಸೇರಿದ್ದೀನಿ ಅಂತ ಇಂಡುವಾಳು ಸಚ್ಚಿದಾನಂದ ಹೇಳಿದ್ದಾರೆ. ಶ್ರೀರಂಗಪಟ್ಟಣ ಕ್ಷೇತ್ರದಿಂದ ಈ ಬಾರಿ ವಿಧಾನಸಭೆ ಪ್ರವೇಶಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇನ್ನು ಸಚ್ಚಿದಾನಂದ ಆಗಮನದಿಂದ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಗೆ ಹೊಸ ಶಕ್ತಿ ಬಂದಿದೆ ಅಂತ ಸಚಿವ ನಾರಾಯಣಗೌಡ ಹೇಳಿದ್ರು. ವಿರೋಧಿಗಳನ್ನು ಸದೆಬಡಿದಾಗ ಮಾತ್ರ ಪಕ್ಷಕ್ಕೆ ಬಲ ಬರಲಿದೆ ಅಂತ ಸ್ವಪಕ್ಷದ ವಿರುದ್ಧ ಸಿ.ಪಿ.ಯೋಗೇಶ್ವರ್ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ರು.
ಒಟ್ಟಿನಲ್ಲಿ ಹಲವು ದಿನಗಳಿಂದ ಸಚ್ಚಿದಾನಂದ ಬಿಜೆಪಿ ಸೇರಲಿದ್ದಾರೆ ಅಂತ ಹೇಳಲಾಗುತ್ತಿತ್ತು. ಈಗ ಸಚ್ಚಿದಾನಂದ ಪಕ್ಷ ಸೇರ್ಪಡೆಯಾಗಿದ್ದಾರೆ. ಮೂಲಕ ಮಂಡ್ಯದಲ್ಲಿ ಕಮಲ ಅರಳಿಸುವ ಬಿಜೆಪಿ ನಾಯಕರ ಪ್ಲಾನ್ ಫಲಿಸುತ್ತಾ ಅನ್ನೋದು ಚುನಾವಣೆ ಬಳಿಕ ತಿಳಿಯಲಿದೆ.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಶ್ರೀ @BlrNirmal ಹಾಗೂ ಸಚಿವರು & ಪ್ರಮುಖರ ಉಪಸ್ಥಿತಿಯಲ್ಲಿ ಕೆಪಿಸಿಸಿ ಮಾಜಿ ಸದಸ್ಯ ಎಸ್. ಸಚ್ಚಿದಾನಂದ, ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಸ್.ಎಲ್. ಲಿಂಗರಾಜು & ಮಾಜಿ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು & ಬೆಂಬಲಿಗರು ಪಕ್ಷಕ್ಕೆ ಸೇರ್ಪಡೆಗೊಂಡರು. pic.twitter.com/j9gxRMgWZy
— BJP Karnataka (@BJP4Karnataka) November 28, 2022
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post