ಚಾಮರಾಜನಗರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಡಾನೆಗೆ ಲಾರಿ ಚಾಲಕನೋರ್ವ ಕಬ್ಬು ಕೊಟ್ಟಿದ್ದಕ್ಕೆ ತಮಿಳುನಾಡು ಅರಣ್ಯ ಇಲಾಖೆ ಸಿಬ್ಬಂದಿ ಬರೋಬ್ಬರಿ 75 ಸಾವಿರ ರೂಪಾಯಿ ದಂಡ ಹಾಕಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಸಿದ್ದರಾಜು ಎಂಬುವವರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ದಂಡ ಹಾಕಿದ್ದಾರೆ. ಗಡಿ ಭಾಗವಾದ ತಮಿಳುನಾಡಿನ ಆಸನೂರು ಸಮೀಪ ರಸ್ತೆ ಬದಿ ನಿಂತಿದ್ದ ಆನೆಗೆ ಕಬ್ಬಿನ ಕಂತೆಗಳನ್ನು ಚಾಲಕ ಸಿದ್ದರಾಜು ಎಸೆದಿದ್ದಾರೆ. ಇದೇ ವೇಳೆ ಅದನ್ನು ಕಂಡ ಅರಣ್ಯ ಇಲಾಖೆ ಸಿಬ್ಬಂದಿ ವಿಚಾರಿಸಿ ದಂಡ 75 ಸಾವಿರ ದಂಡವನ್ನು ಹಾಕಿದ್ದಾರೆ.
ಇನ್ನು, ದಂಡ ಕಟ್ಟುವ ತನಕ ಲಾರಿ ಚಾಲಕ ಸಿದ್ದರಾಜು ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಿಡಲೇ ಇಲ್ಲ. ಹೀಗಾಗಿ ಚಾಲಕ 75 ಸಾವಿರ ದಂಡವನ್ನು ಕೊಟ್ಟಿದ್ದಾರೆ ಎನ್ನಲಾಗಿದೆ. ಲಾರಿ ಚಾಲಕನಿಗೆ ಈ ರೀತಿಯ ದಂಡ ವಿಧಿಸಿದ್ದರಿಂದ ಸಾರ್ವಜನಿಕರು ಆಕ್ರೋಶವನ್ನು ಹೊರ ಹಾಕಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post