ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ನ ಎರಡನೇ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ ವೇಗಿ ಜೇಮ್ಸ್ ಆ್ಯಂಡರ್ಸನ್ 2 ವಿಕೆಟ್ ಪಡೆದುಕೊಂಡ್ರು. ಆ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 3 ಫಾರ್ಮೆಟ್ ಸೇರಿ, ಅತಿಹೆಚ್ಚು ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ, ಮೂರನೇ ಸ್ಥಾನಕ್ಕೇರಿದ್ರು. ಅಲ್ಲದೇ ಅನಿಲ್ ಕುಂಬ್ಳೆ ದಾಖಲೆಯನ್ನ ಮುರಿದ್ರು.
ಅನಿಲ್ ಕುಂಬ್ಳೆ ಮೂರು ಮಾದರಿ ಸೇರಿ 956 ವಿಕೆಟ್ ಪಡೆದಿದ್ರೆ, ಆ್ಯಂಡರ್ 957 ವಿಕೆಟ್ ಬೇಟೆಯಾಡಿದ್ದಾರೆ. ಇನ್ನು ಈ ಲಿಸ್ಟ್ನಲ್ಲಿ ಮುತ್ತಯ್ಯ ಮುರಳೀಧರನ್, ಶೇನ್ ವಾರ್ನ್ ಮೊದಲೆರೆಡು ಸ್ಥಾನದಲ್ಲಿದ್ದಾರೆ.
ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ನಲ್ಲಿ ಬೆನ್ ಸ್ಟೋಕ್ಸ್ ನಾಯಕತ್ವದ ಇಂಗ್ಲೆಂಡ್ ಭರ್ಜರಿ ಜಯ ಸಾಧಿಸಿದೆ. 74 ರನ್ಗಳಿಂದ ಬಾಬರ್ ಅಜಮ್ ಪಡೆಯನ್ನ ಮಣಿಸಿದೆ. ಆ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿದೆ.
ಮೊದಲ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ 657 ರನ್ಗಳಿಗೆ ಆಲೌಟ್ ಆಗಿತ್ತು. ಪಾಕಿಸ್ತಾನ ಮೊದಲ ಇನ್ನಿಂಗ್ಸ್ನಲ್ಲಿ 579 ರನ್ಗೆ ಸರ್ವಪತನ ಕಂಡಿತ್ತು. ಇದರಿಂದ ಇಂಗ್ಲೆಂಡ್ 78 ರನ್ಗಳ ಮುನ್ನಡೆ ಸಾಧಿಸ್ತು. ಎರಡನೇ ಇನ್ನಿಂಗ್ಸ್ನಲ್ಲಿ 7 ವಿಕೆಟ್ ನಷ್ಟಕ್ಕೆ 264 ರನ್ಕಲೆಹಾಕಿತ್ತು. 342 ರನ್ಗಳ ಗುರಿ ಪಡೆದಿದ್ದ ಪಾಕಿಸ್ತಾನ, 268ರನ್ಗಳಿಗೆ ಆಲೌಟ್ ಆಗಿ, ಆಂಗ್ಲರಿಗೆ ಶರಣಾಯ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post