ಕನ್ನಡ ಕಿರುತೆರೆ ಲೋಕದಲ್ಲಿ ಹೊಸ ಸೆನ್ಸೇಷನ್ ಸೃಷ್ಟಿಸಿದ್ದ ‘ಜೊತೆ ಜೊತೆಯಲಿ’ ಹೀರೋ ಅನಿರುದ್ಧ್ ತಮ್ಮ ಅಭಿಮಾನಿಗಳ ಬಳಗಕ್ಕೆ ಗುಡ್ನ್ಯೂಸ್ ಕೊಟ್ಟಿದ್ದಾರೆ. ತಾವು ಮತ್ತೆ ಸಿರಿಯಲ್ ಜಗತ್ತಿಗೆ ಕಂಬ್ಯಾಕ್ ಮಾಡ್ತಿರೋದಾಗಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ.
ಖಾಸಗಿ ವಾಹಿಯಲ್ಲಿ ಪ್ರಸಾರವಾಗುವ ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಅನಿರುದ್ಧ್ ಕಿರುತೆರೆಗೆ ಪ್ರವೇಶ ಮಾಡಿದ್ದರು. ಕಿರುತೆರೆಯಲ್ಲಿ ಅನಿರುದ್ಧ್ ಕೈ ಹಿಡಿದ ‘ಜೊತೆ ಜೊತೆಯಲಿ’ ಸೀರಿಯಲ್ನಿಂದ ಮನೆ ಮಾತಾಗಿ ಉಳಿದುಕೊಂಡರು. ಟಿಆರ್ಪಿಗಳಲ್ಲೂ ಜೊತೆ ಜೊತೆಯಲಿ ಧಾರವಾಹಿ ಹಿಟ್ ನೀಡಿತ್ತು.
ಆದರೆ ಕಳೆದೆರಡು ತಿಂಗಳ ಹಿಂದೆ ‘ಜೊತೆ ಜೊತೆಯಲಿ’ ಧಾರಾವಾಹಿ ನಿರ್ಮಾಪಕ ಆರೂರು ಜಗದೀಶ್ ಮತ್ತು ಅನಿರುದ್ಧ್ ನಡುವೆ ಮನಸ್ಥಾಪ ಉಂಟಾಗಿತ್ತು. ಅದು ಬಹಿರಂಗವಾಗಿ ಸ್ಫೋಟಗೊಂಡ ಬೆನ್ನಲ್ಲೇ, ಅನಿರುದ್ಧ ವಿರುದ್ಧ ಕನ್ನಡ ಕಿರುತೆರೆಯಿಂದ ಬ್ಯಾನ್ ಅಸ್ತ್ರ ಪ್ರಯೋಗವಾಗಿತ್ತು. ಇದಿರಿಂದ ಅನಿರುದ್ಧ ಅಭಿಮಾನಿಗಳು ತುಂಬಾ ನಿರಾಸೆಗೆ ಒಳಗಾಗಿದ್ದರು. ಆದರೆ ಇದೀಗ ಮತ್ತೆ ಅನಿರುದ್ಧ್ ಕಿರುತೆರೆ ಲೋಕಕ್ಕೆ ಕಂಬ್ಯಾಕ್ ಮಾಡ್ತಿದ್ದಾರೆ. ಉದಯ ಟಿವಿಯಲ್ಲಿ ಪ್ರಸಾರವಾಗಲಿರುವ ಹಾಗೂ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರ ನಿರ್ದೇಶನದ ಹೊಸ ಧಾರವಾಹಿ ‘ಸೂರ್ಯವಂಶ’ದಲ್ಲಿ ನಟನಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಬಗ್ಗೆ ಸ್ವತಃ ನಟ ಅನಿರುದ್ಧ್ ತಮ್ಮ ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಅತ್ಯಂತ ಸಂತೋಷದಿಂದ ತಮ್ಮೆಲ್ಲರ ಜೊತೆ ಒಂದು ಸಿಹಿ ಸುದ್ದಿ ಹಂಚಿಕೊಳ್ಳುತ್ತಾ ಇದ್ದೇನೆ…
ನಮ್ಮೆಲ್ಲರ ನೆಚ್ಚಿನ ಉದಯ ವಾಹಿನಿಯಲ್ಲಿ ಅತಿ ಶೀಘ್ರದಲ್ಲಿ ಪ್ರಸಾರವಾಗಲಿರುವ ಕಲಾ ಸಾಮ್ರಾಟ್ ಎಸ್. ನಾರಾಯಣ್ ಸರ್ ರವರ ರಚನೆ ಹಾಗೂ ನಿರ್ದೇಶನದ ಹೊಸ ಧಾರಾವಾಹಿ ‘ಸೂರ್ಯವಂಶ’ ದಲ್ಲಿ ನಾನು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಾ ಇದ್ದೇನೆ. ಇದು ತಮ್ಮೆಲ್ಲರ ಹಾರೈಕೆ, ಆಶೀರ್ವಾದಗಳ ಫಲ. ತಮ್ಮ ಪ್ರೀತಿ, ಪ್ರೋತ್ಸಾಹ ನನ್ನ ಮೇಲೆ ಸದಾ ಇರುತ್ತೆ ಅನ್ನೋ ಭರವಸೆ ನನಗಿದೆ
ಅನಿರುದ್ಧ್, ನಟ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post