ಜೈಪುರ: ಅಪ್ರಾಪ್ತ ಬಾಲಕನೊಬ್ಬ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಬಿಲ್ವಾರದಲ್ಲಿ ನಡೆದಿದೆ. ರವೀಂದ್ರ (17) ಮೃತ ಬಾಲಕ.
ಮೃತ ಬಾಲಕ ಮೇಘರಾಸ್ ಗ್ರಾಮದ ನಿವಾಸಿ. ಮೃತ ಬಾಲಕನು ರವೀಂದ್ರ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಆ ಯುವತಿಯು ಕೆಲ ದಿನಗಳ ಹಿಂದಷ್ಟೇ ಬೇರೆ ಯುವಕನೊಂದಿಗೆ ಮದುವೆಯಾಗಿದ್ದಳು. ಹೀಗಾಗಿ ಮಾನಸಿಕ ಖಿನ್ನತೆಗೆ ಒಳಗಾಗಿ, ನೀನಿಲ್ಲದೆ ಬದುಕಲಾರೆ ಎಂದು ಮೊಬೈಲ್ನಲ್ಲಿ ಸ್ಟೇಟಸ್ ಹಾಕಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಇನ್ನು ಬಾಲಕ ತಲೆಗೆ ಗುಂಡು ಹಾರಿಸಿಕೊಳ್ಳುತ್ತಿರುವ ದೃಶ್ಯ ಮಾಹಾತ್ಮ ಗಾಂಧಿ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನಾ ಸ್ಥಳಲ್ಲೆ ಕರೋಯಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post