ಮದುವೆ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಐದು ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಜೋಧ್ಪುರದಲ್ಲಿ ನಡೆದಿದೆ. ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಫೋಟ ಪ್ರಕರಣದಲ್ಲಿ ಸುಮಾರು 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಿಲಿಂಡರ್ ಸ್ಫೋಟದಿಂದ ಬೆಂಕಿಹೊತ್ತಿಕೊಂಡು ಅವಘಡ ಸಂಭವಿಸಿದೆ. ಜೋಧಪುರದ ಭುನ್ಗ್ರಾ ಗ್ರಾಮದಲ್ಲಿ ದುರಂತ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ತಿಳಿಸಿದ್ದಾರೆ.
ಇದೊಂದು ಗಂಭೀರ ದುರ್ಘಟನೆ. ಗಾಯಗೊಂಡಿರುವ 42 ಮಂದಿಯ ಜೀವಕ್ಕೆ ಅಪಾಯ ಇಲ್ಲ. ಎಂಜಿಹೆಚ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇನ್ನು ಮೃತರ ಕುಟುಂಬಕ್ಕೆ ರಾಜಸ್ಥಾನ ಸರ್ಕಾರ ಪರಿಹಾರವನ್ನ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಸೇರಿದಂತೆ ಹಲವರು ದುರಂತದ ಬಗ್ಗೆ ಕಂಬನಿ ಮಿಡಿದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post