ಮಾಸ್ಕೋ: ಮೆಗಾ ಖಿಮ್ಕಿ ಶಾಪಿಂಗ್ ಸೆಂಟರ್‌ನಲ್ಲಿ ಏಕಾಏಕಿ ಭಾರೀ ಅಗ್ನಿ ಅವಘಡ ಸಂಭವಿಸಿರೋ ಘಟನೆ ಮಾಸ್ಕೋದಲ್ಲಿ ನಡೆದಿದೆ. ಇನ್ನು 7 ಸಾವಿರ ಚದರ ಮೀಟರ್ ವ್ಯಾಪ್ತಿಯಲ್ಲಿ ಬೆಂಕಿಯ ಜ್ವಾಲೆ ಹಬ್ಬಿದೆ. ಕೂಡಲೇ ಘಟನಾ ಸ್ಥಳಕ್ಕೆ ರಷ್ಯಾದ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.
ಮಾಸ್ಕೋದಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡಕ್ಕೆ ಕೆಲ ದುಷ್ಕರ್ಮಿಗಳು ಕಾರಣ ಎಂದು ಹೇಳಲಾಗುತ್ತಿದೆ. ಹೀಗಾಗಿ ಅಲ್ಲಿನ ಪೊಲೀಸ್ ಅಧಿಕಾರಿಗಳು ಹೆಚ್ಚಿನ ತನಿಖೆಯನ್ನು ನಡೆಸಲು ಮುಂದಾಗಿದ್ದಾರೆ. ಈ ಬೆಂಕಿ ಅವಘಡದಿಂದ ಖಿಮ್ಕಿ ಶಾಪಿಂಗ್ ಸೆಂಟರ್‌ನಲ್ಲಿ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.
#Russia on 🔥: Shopping mall in #Moscow is on fire, with intermittent explosions. pic.twitter.com/gfd0xzolIU
— Igor Sushko (@igorsushko) December 9, 2022
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post