ರಾಯಚೂರು: ಹತ್ತಿ ಬಿಡಿಸುವ ಕಾರ್ಮಿಕರನ್ನ ಕರೆದೊಯ್ಯುತ್ತಿದ್ದ ಬುಲೆರೋ ವಾಹನ ಪಲ್ಟಿಯಾಗಿ 16 ಮಂದಿ ಗಾಯಗೊಂಡಿರುವ ಘಟನೆ ಸಿರವಾರ ತಾಲೂಕಿನ ಬಳಿ ನಡೆದಿದೆ.
ಕಾರ್ಮಿಕರು ಹತ್ತಿ ಬಿಡಿಸಲೆಂದು ಕೆರಕಲಮರಡಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಸಿರವಾರ ತಾಲೂಕಿನ ಬಳಿ ಬುಲೆರೋ ವಾಹನ ಪಲ್ಟಿಯಾಗಿದೆ. ಪರಿಣಾಮ ಘಟನೆಯಲ್ಲಿ 16 ಮಂದಿ ಗಾಯಗೊಂಡಿದ್ದಾರೆ. ಇದರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಘಟನಾ ಸ್ಥಳಕ್ಕೆ ಸಿರವಾರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post