ರಾಮನಗರ: ಕನಕಪುರ ತಾಲೂಕಿನ ಮಾರಣ್ಣದೊಡ್ಡಿ ರಸ್ತೆ ಬಳಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಶೃತಿ (32) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಮಹಿಳೆ.
ಕನಕಪುರ ಟೌನ್ ಕುರುಪೇಟೆ ವ್ಯಾಪ್ತಿಯ ಶೃತಿಯ ಶವ ಪತ್ತೆಯಾಗಿದೆ. ಯಾರೋ ಕೊಲೆ ಮಾಡಿ ರಸ್ತೆ ಬದಿಯಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನ ಮುಂದುವರಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post