ಬೆಂಗಳೂರು: ರಾಜ್ಯದಲ್ಲಿ ಚೀನಾದ ರೂಪಾಂತರಿ ಬಿಎಫ್7 ಭೀತಿ ಎದುರಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಜತೆಗೆ ಕೋವಿಡ್ ನಿಯಂತ್ರಣಕ್ಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಲ್ಲಿ ಮಾಸ್ಕ್ ಮತ್ತು ಸ್ಯಾನಿಟೈಸಿಂಗ್ ಅನ್ನು ಕಡ್ಡಾಯಗೊಳಿಸಲಾಗಿದೆ. ಶಿಕ್ಷಕರು ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು. ನೆಗಡಿ, ಕೆಮ್ಮು, ಜ್ವರದಂತಹ ಲಕ್ಷಣಗಳು ಕಂಡು ಬಂದರೆ ತಕ್ಷಣವೇ ಕೊರೊನಾ ಸೋಂಕು ತಪಾಸಣೆ ನಡೆಸಬೇಕು. ಜೊತೆಗೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸಾಮಾಜಿಕ ಅಂತರ ಪಾಲನೆ ಮಾಡಬೇಕೆಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಇಂದು ಆರೋಗ್ಯ ಸಚಿವ ಡಾ. ಸುಧಾಕರ್ ಮತ್ತು ಕಂದಾಯ ಸಚಿವ ಆರ್. ಅಶೋಕ್ ನೇತೃತ್ವಲ್ಲಿ ಮಹತ್ವದ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಸರ್ಕಾರ ಯಾವುದೇ ನಿರ್ಬಂಧವನ್ನು ಹೇರಿಲ್ಲ. ಬದಲಿಗೆ ಎಲ್ಲರೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಮನವಿ ಮಾಡಿಕೊಂಡರು. ಹೊಸ ವರ್ಷದ ಸಂಭ್ರಮಾಚರಣೆ ಮತ್ತು ಶಾಲಾ ಕಾಲೇಜುಗಳಿಗೆ ಪ್ರತ್ಯೇಕ ಸುತ್ತೋಲೆ ಹೊರಡಿಸಲು ನಿರ್ಧರಿಸಲಾಗಿದೆ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post