ದೆಹಲಿಯಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಸೂಕ್ತ ಭದ್ರತೆ ನೀಡಿಲ್ಲ ಎನ್ನುವ ಕಾಂಗ್ರೆಸ್ನ ಕೆ.ಸಿ.ವೇಣುಗೋಪಾಲ್ ಆರೋಪವನ್ನು ತಳ್ಳಿ ಹಾಕಿರುವ ಸಿಆರ್ಪಿಎಫ್ ಅಧಿಕಾರಿಗಳು ಯಾತ್ರೆಗೆ ಸೂಕ್ತ ಭದ್ರತೆ ನೀಡಲಾಗಿದೆ ಎಂದು ಹೇಳಿದ್ದಾರೆ.
ನಿನ್ನೆ ಕಾಂಗ್ರೆಸ್ನ ವೇಣುಗೋಪಾಲ್ ಅವರು ಸರಿಯಾದ ಭದ್ರತೆ ನೀಡಿಲ್ಲ ಎಂದು ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇವತ್ತು ಸಿಆರ್ಪಿಎಫ್ ಅಧಿಕಾರಿಗಳು ಮಾತನಾಡಿ, ಭದ್ರತಾ ಮಾರ್ಗಸೂಚಿಯಲ್ಲಿನ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿದೆ. ಯಾತ್ರೆಗೆ ಹೆಚ್ಚಿನ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿತ್ತು ಎಂದಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಭದ್ರತೆಯ ಕಾರ್ಯಸೂಚಿಯನ್ನು ಪಾಲಿಸಬೇಕು. ರಾಹುಲ್ ಅವರೇ ಭದ್ರತಾ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ. ಈ ಬಗ್ಗೆ ಕಾಲ ಕಾಲಕ್ಕೆ ರಾಹುಲ್ ಗಾಂಧಿಗೆ ಮಾಹಿತಿ ನೀಡಲಾಗಿದೆ. 2020 ರಿಂದ ಇಲ್ಲಿಯವರೆಗೆ 113 ಬಾರಿ ರಾಹುಲ್ ಗಾಂಧಿ ಅವರೇ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ ಎಂದು ಹೇಳಿದ್ದಾರೆ.
ಇನ್ನು, ಸಿಆರ್ಪಿಎಫ್ ಅಧಿಕಾರಿಗಳು ರಾಹುಲ್ ಗಾಂಧಿಗೆ ಜಡ್ ಪ್ಲಸ್ ಭದ್ರತೆ ನೀಡುತ್ತಿದ್ದಾರೆ. ಈ ಹಿಂದೆ ರಾಹುಲ್ಗಿದ್ದ ಎಸ್ಪಿಜಿ ಭದ್ರತೆಯನ್ನ ಕೇಂದ್ರ ಸರ್ಕಾರ ಹಿಂತೆಗೆದುಕೊಂಡಿತ್ತು. ಸದ್ಯ ದೇಶದಲ್ಲಿ ಪ್ರಧಾನಿ ಮೋದಿಗೆ ಮಾತ್ರ ಎಸ್ಪಿಜಿ ಭದ್ರತಾ ಸೌಲಭ್ಯ ನೀಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post