ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 9ರ ವಿನ್ನರ್ ಆಗಿ ರೂಪೇಶ್ ಶೆಟ್ಟಿ ಹೊರಹೊಮ್ಮಿದ್ದಾರೆ. ತುಳುನಾಡಿನ ಪ್ರತಿಭೆ ರೂಪೇಶ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಹೊರಹೊಮ್ಮಿದ್ದಕ್ಕೆ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.
ಇನ್ನು ರೂಪೇಶ್ ಶೆಟ್ಟಿ ಬಿಗ್ಬಾಸ್ ಮನೆಯಲ್ಲಿ ಸಖತ್ ಆ್ಯಕ್ಟಿವ್ ಆಗಿ ಎಲ್ಲಾ ಟಾಸ್ಕ್ಗಳನ್ನು ಆಡುತ್ತಿದ್ದರು. ಜೊತೆಗೆ ಬಿಗ್ಬಾಸ್ ವೀಕ್ಷಕರಿಗೆ ಮನರಂಜನೆ ನೀಡುತ್ತಿದ್ದರು. ಮನೆಯಲ್ಲಿದ್ದ ಉಳಿದ ಸ್ಪರ್ಧಿಗಳ ಜೊತೆ ಉತ್ತಮ ಬಾಂಧವ್ಯವನ್ನು ಇಟ್ಟುಕೊಂಡಿದ್ದರು.
ಇನ್ನು ರೂಪೇಶ್ ಶೆಟ್ಟಿ ತುಳು ಮತ್ತು ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಗಿರಿಗಿಟ್ ಚಿತ್ರದ ಮೂಲಕ ಸೂಪರ್ ಸಕ್ಸಸ್ ಕಂಡಿದ್ದರು. ಬಿಗ್ಬಾಸ್ ಒಟಿಟಿ ಸೀಸನ್ 1ರಲ್ಲಿ ವಿನ್ನರ್ ಆಗಿದ್ದರು. ಇದೀಗ ಬಿಗ್ಬಾಸ್ ಸೀಸನ್9 ರಲ್ಲಿ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ.
ಟಾಪ್ 5 ಫೈನಲಿಸ್ಟ್‌ಗಳಲ್ಲಿ ರೂಪೇಶ್ ಶೆಟ್ಟಿ ಕೂಡ ಒಬ್ಬರಾಗಿದ್ದರು. ರಾಕೇಶ್ ಅಡಿಗ, ದೀಪಿಕಾ ದಾಸ್, ರಾಜಣ್ಣಗೆ ಭಾರೀ ಪೈಪೋಟಿ ಕೊಟ್ಟು ರೂಪೇಶ್ ಶೆಟ್ಟಿ ವಿನ್ನರ್ ಆಗಿದ್ದಾರೆ. ರೂಪೇಶ್ ಶೆಟ್ಟಿ ಬಿಗ್ಬಾಸ್ ಸೀಸನ್ ವಿನ್ನರ್ ಆಗುತ್ತಿದ್ದ ಸುದ್ದಿ ತಿಳಿಯುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ರೂಪೇಶ್ ಶೆಟ್ಟಿ ಫೋಟೋಸ್ ವೈರಲ್ ಆಗುತ್ತಿವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post