ರಾಯಚೂರು: ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದ ಗೋರ್ಕಲ್ ಬಳಿ ನಡೆದಿದೆ. ರಫಿ ಗೋರ್ಕಲ್ (22) ಮೃತ ದುರ್ದೈವಿ.
ಮಾನ್ವಿ ಕಡೆ ಹೊರಟ ಬಸ್ಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಈ ಅಪಘಾತದಲ್ಲಿ ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಗಾಯಾಳು ವ್ಯಕ್ತಿಯನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಮಾನ್ವಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post