ಹೈದರಾಬಾದ್: ತೆಲಂಗಾಣದ ಸಿಎಂ ಕೆ. ಚಂದ್ರಶೇಖರ್ ರಾವ್ ಕರ್ನಾಟಕದ ಪ್ರಮುಖ ರಾಜಕಾರಣಿಯೊಬ್ಬರಿಗೆ 500 ಕೋಟಿ ರೂಪಾಯಿ ಆಫರ್ ಕೊಟ್ಟಿದ್ದಾರೆ ಎಂದು ತೆಲಂಗಾಣ ರಾಜ್ಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರೇವಂತ್ ರೆಡ್ಡಿ ಗಂಭೀರ ಆರೋಪ ಎಸಗಿದ್ದಾರೆ.
30 ಕ್ಷೇತ್ರದಲ್ಲಿ ಸೋಲಿಸಲು ಆಫರ್
ಈ ಸಂಬಂಧ ಮಾತನಾಡಿರುವ ರೇವಂತ್ ರೆಡ್ಡಿ, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 130 ಕ್ಷೇತ್ರಗಳನ್ನ ಗೆಲ್ಲುವ ವಿಶ್ವಾಸದಲ್ಲಿದೆ. ಆದ್ರೆ, ತೆಲಂಗಾಣ ಸಿಎಂ ಕೆಸಿಆರ್ ಅವರು 130ರಲ್ಲಿ 30 ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳನ್ನ ಸೋಲಿಸಲು ಯತ್ನಿಸಿದ್ದಾರೆ. ಇದಕ್ಕಾಗಿ ಕರ್ನಾಟಕದ ಪ್ರಮುಖ ರಾಜಕಾರಣಿಯೊಬ್ಬರಿಗೆ 500 ಕೋಟಿ ರೂಪಾಯಿ ಆಫರ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ರೇಡ್ ಮಾಡಿದಾಗ ಮಾಹಿತಿ ಲೀಕ್
ತೆಲಂಗಾಣದ ತಮ್ಮ ಫಾರ್ಮ್ ಹೌಸ್‌ನಲ್ಲಿ 500 ಕೋಟಿ ರೂಪಾಯಿಯ ಆಫರ್ ನೀಡಿದ್ದಾರೆ. ಕಾಂಗ್ರೆಸ್ ಚುನಾವಣಾ ಕಾರ್ಯತಂತ್ರ ಸುನೀಲ್ ಕನ್ನುಗೋಲು ಕಚೇರಿ ಮೇಲೆ ದಾಳಿ ನಡೆದಾಗ ಪೊಲೀಸರಿಂದ ಸರ್ವೇ ವರದಿ ಪಡೆದಿದ್ದಾರೆ. ಇದಕ್ಕೆ ಸಂಬಂಧಪಟ್ಟ ದಾಖಲೆಗಳು ತಮ್ಮ ಬಳಿ ಇವೆ ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ.
ಬಿಆರ್‌ಎಸ್ ಱಲಿಗೆ ಜೆಡಿಎಸ್ ಗೈರು
ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್, ತಮ್ಮ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾತನಾಡ್ತಾರೆ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಮೂಲಕ ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ. ಈ ದುರುದ್ದೇಶ ಗೊತ್ತಾಗಿಯೇ ಬಿಆರ್‌ಎಸ್ ಸಮಾವೇಶದಲ್ಲಿ ಜೆಡಿಎಸ್ ನಾಯಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಭಾಗಿಯಾಗಿಲ್ಲ ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ.
ಬರೀ ಹಣದಿಂದ ಚುನಾವಣೆ ನಡೆಯಲ್ಲ
ರೇವಂತ್ ರೆಡ್ಡಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ತೆಲಂಗಾಣ, ಕರ್ನಾಟಕ ಕಾಂಗ್ರೆಸ್ಗೆ ಏನ್ ಸಂಬಂಧ? ಕೇವಲ ಹಣದಲ್ಲಿ ಚುನಾವಣೆ ನಡೆಸೋಕು ಸಾಧ್ಯವಿಲ್ಲ. ಹಣವೊಂದಿದ್ದರೆ ಆಗಲ್ಲ, ಜನರ ವಿಶ್ವಾಸ ತುಂಬಾ ಮುಖ್ಯ. ಯಾರಿಗೆ 500 ಕೋಟಿ ರೂಪಾಯಿ ಆಫರ್ ಕೊಟ್ಟಿದ್ದಾರಂತೆ? ಸುಮ್ಮನೆ ಹೇಳ್ತಿದ್ದಾರೆ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected].com
Discussion about this post