ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್ ಫೀಚರ್ ಪರಿಚಯಿಸಿದ ಬಳಿಕ ಇದನ್ನು ಬಳಕೆ ಮಾಡುವವರ ಸಂಖ್ಯೆ ವಿಪರೀತವಾಗಿದೆ. ಅದರಲ್ಲೂ ಹುಡುಗಿಯರಂತೂ ಸಿಕ್ಕ ಸಿಕ್ಕಲ್ಲಿ ನಿಂತುಕೊಂಡು ರೀಲ್ಸ್ ಮಾಡುತ್ತಿರುತ್ತಾರೆ. ಆಮೇಲೆ ಇನ್‌ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡುತ್ತಾರೆ. ಅದರಂತೆ ಇಲ್ಲೊಬ್ಬಳು ಇನ್ಸ್ಟಾಗ್ರಾಂ ತಾರೆ ರೀಲ್ಸ್ ಮಾಡಿದ್ದಕ್ಕೆ ಪಲೀಸರು 17 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.
ವೈಶಾಲಿ ಚೌಧರಿ ರಸ್ತೆಯಲ್ಲಿ ನಿಂತುಕೊಂಡು ರೀಲ್ಸ್ ಮಾಡಿದ್ದಾಳೆ ಮತ್ತು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾಳೆ. ಈ ಕಾರಣಕ್ಕೆ ಗಾಝಿಯಾಬಾದ್ ಟ್ರಾಫಿಕ್ ಪೊಲೀಸರು 17 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಹಿಯಾಬಾದ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ವೈಶಾಲಿ ಇನ್ಸ್ಟಾಗ್ರಾಂ ರೀಲ್ಸ್ಗಾಗಿ ಹೀಗೆ ಮಾಡಿರುವುದಾಗಿ ನಿಜ ಸಂಗತಿ ಹೇಳಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
View this post on Instagram
View this post on Instagram
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post