ಬೆಂಗಳೂರು: ನಗರದ ಫ್ರೀಡಂಪಾರ್ಕ್ನಲ್ಲಿ ವರಲಕ್ಷ್ಮೀ ನೇತೃತ್ವದಲ್ಲಿ ನಡೆಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಇವತ್ತು ಮುಂದುವರೆದಿದೆ. ವೇತನ ಹೆಚ್ಚಳ, ಖಾಯಂ ಉದ್ಯೋಗ ಹಾಗೂ ನಮ್ಮನ್ನು ಸರ್ಕಾರಿ ನೌಕರರು ಎಂದು ಪರಿಗಣಿಸುವಂತೆ ಸರ್ಕಾರಕ್ಕೆ ಒತ್ತಾಯ ಮಾಡ್ತಿದ್ದಾರೆ.
ಕೊರೆಯುವ ಚಳಿ ಲೆಕ್ಕಿಸದೇ ಸಾವಿರಾರು ಸಂಖ್ಯೆಯ ಕಾರ್ಯಕರ್ತೆಯರು ಪ್ರತಿಭಟನೆಯನ್ನ ಮಾಡ್ತಿದ್ದಾರೆ. ಪಾರ್ಕ್ನಲ್ಲಿ ಸರಿಯಾದ ಸೌಲಭ್ಯಗಳಿಲ್ಲದ ಕಾರಣ ರಾತ್ರಿ ವೇಳೆ ತಮಗೆ ಸಿಕ್ಕ ಸ್ಥಳದಲ್ಲೇ ಮಲಗುತ್ತಿದ್ದಾರೆ. ಬೇಡಿಕೆ ಈಡೇರಿಸುವರೆಗೂ ಈ ಮುಷ್ಕರ ನಿಲ್ಲಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಇನ್ನು ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳು:
- ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಖಾಯಂ ಮಾಡಬೇಕು
- ಕಾರ್ಯಕರ್ತೆಯರಿಗೆ 31 ಸಾವಿರ ವೇತನ ನೀಡಬೇಕು
- ಮಿನಿ ಅಂಗನವಾಡಿ ಕೇಂದ್ರಗಳನ್ನ ಮೇಲ್ದರ್ಜೆಗೆ ಏರಿಸಬೇಕು
- ನಮಗೂ ಗ್ರಾಚ್ಯುಟಿ ಹಣ, ಪೆನ್ಷನ್ ಜಾರಿಗೆ ತರಬೇಕು
- ಆರೋಗ್ಯವಿಮೆ ಇಎಸ್ಐ ನಮಗೂ ಬೇಕು
- ಕಾಯಿಲೆಯಿಂದ ಬಳಲುತ್ತಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಂಬಳ ಸಹಿತ ರಜೆ ನೀಡಬೇಕು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post