ಚಿಕ್ಕಮಗಳೂರು: ಮಲೆನಾಡಲ್ಲಿ ಈ ವರ್ಷ ಮೊದಲ ಮಂಗನಕಾಯಿಲೆ ಪತ್ತೆಯಾಗಿದೆ. ಬಾಳೆಹೊನ್ನೂರು ಮೂಲದ ವ್ಯಕ್ತಿಗೆ ಕೆಎಫ್ಡಿ ಕಾಯಿಲೆ ಇರುವುದು ಆರೋಗ್ಯ ತಪಾಸಣೆ ವೇಳೆ ಬೆಳಕಿಗೆ ಬಂದಿದೆ.
ಕೊಪ್ಪದಲ್ಲಿದ್ದ ಕೆಲ್ಸ ಮಾಡುತ್ತಿದ್ದ ವ್ಯಕ್ತಿ ಜ್ವರದಿಂದ ಬಳಲುತ್ತಿದ್ದ, ಆರೋಗ್ಯ ತಪಾಸಣೆ ವೇಳೆ ಮಂಗನಕಾಯಿಲೆ ಇರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಟಿಕ್ಸ್ ಕಳುಹಿಸಿದೆ.
ಮಲೆನಾಡಿನಲ್ಲಿ ಮತ್ತೆ ಮಂಗನಕಾಯಿಲೆ ಭೀತಿ ಕಾಣಿಸಿಕೊಂಡಿರುವುದು ಅಲ್ಲಿನ ಜನರಿಗೆ ಶಾಕ್ ನೀಡಿದೆ. ಈಗಾಗಲೇ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡು ಕಾಯಿಲೆ ಹರಡದಂತೆ ಹೈ ಅಲರ್ಟ್ ವಹಿಸಿದೆ.
ಇನ್ನು ಮಂಗನಕಾಯಿಲೆ ಪತ್ತೆಯಾದ ವ್ಯಕ್ತಿ, ಇದ್ದ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರತಿ ವ್ಯಕ್ತಿಗಳ ಬಗ್ಗೆ ನಿಗಾ ವಹಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post