ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಸಿಎಂ ಬಸವರಾಜ ಬೊಮ್ಮಾಯಿ ಮಂಡ್ಯ ಜಿಲ್ಲಾ ಉಸ್ತುವಾರಿಯನ್ನ ಬದಲಾಯಿಸಿದ್ದಾರೆ. ಸಚಿವ ಗೋಪಾಲಯ್ಯ ಅವರಿಗೆ ಗೇಟ್‌ಪಾಸ್ ಕೊಟ್ಟು ಪ್ರಭಾವಿ ಒಕ್ಕಲಿಗ ಸಮುದಾಯದ ನಾಯಕ, ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಮಂಡ್ಯ ಜವಾಬ್ದಾರಿ ನೀಡಿದ್ದಾರೆ.
ಇತ್ತೀಚಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಂಡ್ಯದಲ್ಲಿ ಬೃಹತ್ ಱಲಿ ಮಾಡಿ ಹೋಗಿದ್ರು. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ಕೊಡುವಂತೆ ಸೂಚಿಸಿದ್ದರು. ಜೆಡಿಎಸ್ ಜೊತೆ ಅಂತರ ಕಾಯ್ದುಕೊಳ್ಳಬೇಕು. ಒಳ ಒಪ್ಪಂದಗಳಿಗೆ ಬಿಜೆಪಿ ಪಕ್ಷದಲ್ಲಿ ಅವಕಾಶವಿಲ್ಲ ಎಂದು ಸ್ಪಷ್ಟ ಸೂಚನೆ ಕೊಟ್ಟಿದ್ರು. ಇದೀಗ ಮಂಡ್ಯ ಜಿಲ್ಲೆಗೆ ಕಂದಾಯ ಸಚಿವ ಆರ್ ಅಶೋಕ್ ಅವರನ್ನ ನೇಮಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರ ಆದೇಶ ಹೊರಡಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post