ಬೆಂಗಳೂರು: ವಿಧಾನಸಭಾ ಚುನಾವಣೆಯ ಟಿಕೆಟ್‌ಗೆ ಒತ್ತಡ ಹೆಚ್ಚಾಗುತ್ತಿದ್ದು ಫೆಬ್ರವರಿ 2ನೇ ವಾರದಲ್ಲಿ ಟಿಕೆಟ್ ಘೋಷಣೆ ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಕೈ ನಾಯಕರು ಡಿಸೆಂಬರ್ನಲ್ಲೇ ಟಿಕೆಟ್ ಘೋಷಣೆಗೆ ಮುಂದಾಗಿದ್ರು. ನಂತರ ಜನವರಿಗೆ ಅನೌನ್ಸ್ ಮಾಡುವುದಾಗಿ ಹೇಳಿದ್ದರು. ಆದರೆ ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಬಂಡಾಯವೇಳುವ ಸಂಭವವಿದೆ. ಹೀಗಾಗಿ ಟಿಕೆಟ್ ಘೋಷಣೆಯನ್ನ ಮುಂದೂಡಿದ್ದಾರೆ.
ರಾಜ್ಯದ ಎಲ್ಲಾ ಕ್ಷೇತ್ರದಿಂದ ಕೆಪಿಸಿಸಿಗೆ ಸಕಾಲದಲ್ಲಿ ವರದಿ ತಲುಪಿಲ್ಲ. ಇದೀಗ ಅಂತಿಮವಾಗಿ ಫೆಬ್ರುವರಿ 2ರಂದು ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ಟಿಕೆಟ್ ಅಂತಿಮಗೊಳಿಸುವ ಸಂಬಂಧ ಚರ್ಚೆ ನಡೆಯಲಿದೆ. ನಂತರ ಸಂಭಾವ್ಯರ ಪಟ್ಟಿಯನ್ನ ರಾಜ್ಯ ಕಾಂಗ್ರೆಸ್ ನಾಯಕರು ಹೈಕಮಾಂಡ್ಗೆ ರವಾನಿಸಲಿದ್ದಾರೆ.
ಫೆಬ್ರವರಿ 10ರೊಳಗೆ ಕನಿಷ್ಠ 100 ಕ್ಷೇತ್ರಗಳ ಕಾಂಗ್ರೆಸ್ ಟಿಕೆಟ್ ಅನ್ನು ನಾಯಕರು ಘೋಷಿಸಲಿದ್ದಾರೆ ಎನ್ನಲಾಗುತ್ತಿದೆ. ಈ ಮಧ್ಯೆ ಜೆಡಿಎಸ್, ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರಲು ಕೆಲ ನಾಯಕರು ತುದಿಗಾಲಲ್ಲಿ ನಿಂತಿದ್ದಾರೆ. ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಸಂಬಂಧ ಚುನಾವಣಾ ಸಮಿತಿ ಸಭೆಯಲ್ಲಿ ನಾಯಕರು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post