ಚುನಾವಣೆ ಹತ್ತಿರ ಬರುತ್ತಿದೆ ಹೀಗಾಗಿ ರಾಜಕೀಯ ಪಕ್ಷಗಳು ತಮ್ಮ ಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ಕಾಂಗ್ರೆಸ್ ಕೂಡ ಬ್ಯುಸಿಯಾಗಿ ಪ್ರಚಾರ ನಡೆಸುತ್ತಿದೆ. ಹೀಗಿರುವಾಗ ವಿರೋಧ ಪಕ್ಷ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವತ್ರಿಕ ಚುನಾವಣೆವರೆಗೂ ಮಾಂಸಾಹಾರ ಮುಟ್ಟದಿರಲು ನಿರ್ಧಾರ ತೆಗೆದುಕೊಂಡಿದ್ದಾರೆ.
ಸಿದ್ದರಾಮಯ್ಯ ಮಾಂಸಾಹಾರ ಪ್ರಿಯ ಎಂಬುದು ಎಲ್ಲರಿಗೂ ಗೊತ್ತೇ ಇದೆ . ಆದರೀಗ ಚುನಾವಣೆ ಅಂತ್ಯದವರೆಗೂ ವಿರೋಧ ಪಕ್ಷದ ನಾಯಕ ನಾನ್ವೆಜ್ ಮುಟ್ಟಲ್ಲ ಎಂಬುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.
ಸಿದ್ದರಾಮಯ್ಯ ಅವರ ಈ ದಿಢೀರ್ ನಿರ್ಧಾರಕ್ಕೆ ಕಾರಣ ಏನು?
ಈ ಮೊದಲು ಸಿದ್ದರಾಮಯ್ಯ ಮಾಂಸಾಹಾರ ಸೇವನೆಯ ಅಸ್ತ್ರವನ್ನ ಬಿಜೆಪಿ ಪ್ರಬಲವಾಗಿ ಬಳಕೆ ಮಾಡಿಕೊಂಡಿತ್ತು. ಇದನ್ನೇ ಬಳಸಿಕೊಂಡ ಬಿಜೆಪಿ ಸಿದ್ದರಾಮಯ್ಯ ಅವರನ್ನು ಬೆನ್ನು ಬಿಡದೆ ದೂಷಿಸಿತ್ತು. ಅದರಲ್ಲೂ ಮಾಂಸಾಹಾರ ಸೇವನೆ ಮಾಡಿ ಪವಿತ್ರ ಸ್ಥಳಗಳಿಗೆ ಹೋಗಿರುವ ಸಂಗತಿ ವಿವಾದಕ್ಕೆ ಕಾರಣವಾಗಿತ್ತು.
ಮಾಂಸಹಾರ ಸೇವಿಸಿ ಧರ್ಮಸ್ಥಳದ ಮಂಜುನಾಥನ ಸನ್ನಿಧಿಗೆ ಭೇಟಿ ನೀಡಿದ್ದು ಎಂಬ ವಿಚಾರ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು ಮತ್ತು ವಿವಾದ ಕೂಡ ಸೃಷ್ಟಿಯಾಗಿತ್ತು. ಇದೇ ವಿಚಾರವಾಗಿ ಸಾಕಷ್ಟು ಟೀಕೆಗಳನ್ನು ಎದುರಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವತ್ರಿಕ ಚುನಾವಣೆವರೆಗೂ ಮಾಂಸಾಹಾರ ಮುಟ್ಟದಿರಲು ನಿರ್ಧಾರ ತೆಗೆದುಕೊಂಡಿದ್ದಾರೆ.
ಸಿದ್ದರಾಮಯ್ಯಗೆ ಪೈಲ್ಸ್
ಒಂದೆಡೆ ಚುನಾವಣೆ ವಿಚಾರವಾದ್ರೆ ಮತ್ತೊಂದೆಡೆ ಆರೋಗ್ಯ ದೃಷ್ಟಿಯಿಂದ ಸಿದ್ದರಾಮಯ್ಯ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಪ್ರಮುಖವಾಗಿ ಕಳೆದ ಕೆಲ ದಿನಗಳ ಹಿಂದೆ ಸಿದ್ದರಾಮಯ್ಯ ಅವರಿಗೆ ಪೈಲ್ಸ್ ಆಪರೇಷನ್ ಆಗಿತ್ತು. ಹಾಗಾಗಿ ಸ್ವಲ್ಪ ದಿನಗಳ ಮಟ್ಟಿಗೆ ಮಾಂಸಾಹಾರ ಸೇವನೆ ಬೇಡ ಎಂದು ವೈದ್ಯರ ಸಲಹೆ ನೀಡಿದ್ದಾರೆ. ಹಾಗಾಗಿ ಸದ್ಯಕ್ಕೆ ಮಾಂಸಾಹಾರ ಮುಟ್ಟದಿರಲು ಇದು ಒಂದು ಕಾರಣವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post