ರಾಯಚೂರು: 74ನೇ ಗಣರಾಜ್ಯೋತ್ಸವ ಆಚರಣೆಯ ಸಾಂಸ್ಕೃತಿಕ ಕಾರ್ಯಕ್ರಮದ ನೃತ್ಯದಲ್ಲಿ ಭಾಗಿಯಾಗಿದ್ದ ವ್ಯಕ್ತಿ ಸಾವನ್ನಪ್ಪಿರೋ ದಾರುಣ ಘಟನೆ ಸಿಂಧನೂರಿನಲ್ಲಿ ನಡೆದಿದೆ. ವೆಂಕಟೇಶ್ ಪೂಜಾರಿ (42) ಮೃತ ದುರ್ದೈವಿ.
ಮೃತ ವೆಂಕಟೇಶ್ ಪೂಜಾರಿ ಸಿಂಧನೂರು ತಾಲೂಕಿನ ದಿದ್ದಿಗಿ ಗ್ರಾಮದ ನಿವಾಸಿ. ಸಿಂಧನೂರು ತಾಲೂಕಿನಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ವೆಂಕಟೇಶ ಪೂಜಾರಿ ನೇತೃತ್ವದ ತಂಡ ನೃತ್ಯದಲ್ಲಿ ಭಾಗಿಯಾಗಿತ್ತು. ಈ ವೇಳೆ ಕ್ರೀಡಾಂಗಣದಲ್ಲಿ ನೃತ್ಯ ಮಾಡುತ್ತಿದ್ದಾಗ ಬಿಪಿ ಲೋ ಆಗಿ ಏಕಾಏಕಿ ಅಸ್ವಸ್ಥಗೊಂಡು ಕೆಳಗೆ ಕುಸಿದು ಬಿದ್ದಿದ್ದಾರೆ.
ಕೂಡಲೇ ವೆಂಕಟೇಶ್ ಅವರನ್ನು ಸ್ಥಳೀಯರು ಆಸ್ಪತ್ರೆ ಸಾಗಿಸಲು ಮುಂದಾಗಿದ್ದರು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ವೆಂಕಟೇಶ ಪೂಜಾರಿ ಮೃತಪಟ್ಟಿದ್ದಾರೆ.
ಗಣರಾಜ್ಯೋತ್ಸವದ ನೃತ್ಯದಲ್ಲಿ ಭಾಗಿಯಾಗಿದ್ದ ವ್ಯಕ್ತಿ ಏಕಾಏಕಿ ಕೆಳಗೆ ಬಿದ್ದು ಸಾವು..#newsfirstkannada #kannadalive #raichur pic.twitter.com/YaU3F8IZPi
— NewsFirst Kannada (@NewsFirstKan) January 26, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post