ಮಧ್ಯಪ್ರದೇಶ: ಭಾರತದ ಯುದ್ಧ ವಿಮಾನಗಳಾದ ಸುಖೋಯಿ-30 ಮತ್ತು ಮಿರಾಜ್-2000 ಪರಸ್ಪರ ಮುಖಾಮುಖಿ ಡಿಕ್ಕಿಯಾದ ದುರ್ಘಟನೆ ಮೊರೆನಾ ಜಿಲ್ಲೆಯಲ್ಲಿ ನಡೆದಿದೆ. ಓರ್ವ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದು, ಮತ್ತೊರ್ವ ಪೈಲಟ್ ಸಾವನ್ನಪ್ಪಿದ್ದಾರೆ.
ಈ ಘಟನೆಯು ಇಂದು ಬೆಳಗ್ಗೆ 5:30ರ ಸುಮಾರಿಗೆ ನಡೆದಿದೆ. ಎರಡು ಯುದ್ಧ ವಿಮಾನಗಳು ಗ್ವಾಲಿಯರ್ ವಾಯುನೆಲೆಯಲ್ಲಿ ತಾಲೀಮು ನಡೆಸುತ್ತಿದ್ದವು. ಈ ವೇಳೆ ಆಗಸದಲ್ಲೇ ಸುಖೋಯಿ ಮತ್ತು ಮಿರಾಜ್ ಮುಖಾಮುಖಿ ಡಿಕ್ಕಿಯಾಗಿವೆ.
ತಕ್ಷಣ ಪೈಲಟ್ಗಳಿಬ್ಬರು ತಮ್ಮ ಪ್ರಾಣ ಉಳಿಸಿಕೊಳ್ಳಲು ಯತ್ನಿಸಿದ್ದಾರೆ. ಮೇಲಿಂದ ಬಿದ್ದ ರಭಸಕ್ಕೆ ಓರ್ವ ಪೈಲಟ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ. ಮತ್ತೊರ್ವ ಪೈಲಟ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನು ಸ್ಥಳಕ್ಕೆ ರಕ್ಷಣೆ ಪಡೆ ಆಗಮಿಸಿದ್ದು ಪರಿಶೀಲನೆ ನಡೆಸಿದೆ. ಎರಡು ವಿಮಾನಗಳು ಪ್ರತ್ಯೇಕವಾಗಿ ಕ್ರ್ಯಾಶ್ ಆಗಿವೆಯೇ ಅಥವಾ ಪರಸ್ಪರ ಡಿಕ್ಕಿ ಹೊಡೆದುಕೊಡಿವೆಯೇ ಎಂದು ಇನ್ನು ಸ್ಪಷ್ಟವಾಗಿ ತಿಳಿದು ಬಂದಿಲ್ಲ ಎಂದು ರಕ್ಷಣಾ ಇಲಾಖೆ ತಿಳಿಸಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಘಟನೆ ಬಗ್ಗೆ ಮಾಹಿತಿ ತಿಳಿದುಕೊಂಡಿದ್ದು ತನಿಖೆಗೆ ಆದೇಶಿಸಿದ್ದಾರೆ ಎಂದು ಹೇಳಲಾಗಿದೆ. ಏರ್ಫೋರ್ಸ್ ಮುಖ್ಯಸ್ಥ ವಿಆರ್ ಚೌದರಿಯವರ ಜೊತೆ ಸಚಿವರು ನಿರಂತರ ಸಂಪರ್ಕದಲ್ಲಿದ್ದಾರೆ. ಇನ್ನು ಘಟನೆಯಲ್ಲಿ ಸಣ್ಣಪುಟ್ಟ ಗಾಯಗೊಂಡ ಪೈಲಟ್ಗಳ ಆರೋಗ್ಯವನ್ನ ರಾಜನಾಥ್ ಸಿಂಗ್ ವಿಚಾರಿಸಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
— Moazzam Ali Siddiqui (@MoazzamTweet) January 28, 2023
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post