ರಾಜಸ್ಥಾನದ ಭರತ್ಪುರದಲ್ಲಿ ಚಾರ್ಟೆಡ್ ವಿಮಾನವೊಂದು ಪತನಗೊಂಡಿದೆ. ಸಾವು ನೋವಿನ ಆತಂಕ ಹೆಚ್ಚಾಗಿದೆ.
ತಾಂತ್ರಿಕ ದೋಷದಿಂದ ವಿಮಾನ ಪತನಗೊಂಡಿದೆ ಅಂತಾ ಶಂಕಿಸಲಾಗಿದೆ. ವಿಮಾನದಲ್ಲಿ ಎಷ್ಟು ಜನರಿದ್ದರು ಅನ್ನೋದ್ರ ಬಗ್ಗೆ ಇನ್ನಷ್ಟೇ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು, ರಕ್ಷಣಾ ಪಡೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಡಿಸ್ಟ್ರಿಕ್ಟ್ ಕಲೆಕ್ಟರ್ ಅಲೋಕ್ ರಂಜನ್ ನೀಡಿರುವ ಮಾಹಿತಿ ಪ್ರಕಾರ, ಪೊಲೀಸ್ ಅಧಿಕಾರಿಗಳು ಹಾಗೂ ಸ್ಥಳೀಯ ಆಡಳಿತ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಇನ್ನು ವಿಮಾನ ಅಪಘಾತಕ್ಕೆ ಒಳಗಾದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post