ಉಡುಪಿ: ಕಾರ್ಕಳ ಗಾಂಧಿ ಮೈದಾನದಲ್ಲಿ ಅಪರೂಪದ ಸುಳಿಗಾಳಿ ಕಾಣಿಸಿಕೊಂಡು ನೋಡುಗರನ್ನು ಬೆರಗುಗೊಳಿಸಿದೆ. ಗಾಂಧಿ ಮೈದಾನದಲ್ಲಿ ಮಧ್ಯಾಹ್ನದ ವೇಳೆ ಯುವಕರು ಕ್ರಿಕೆಟ್ ಆಡುತ್ತಿದ್ದರು.
ಈ ವೇಳೆ ಇದ್ದಕ್ಕಿದ್ದಂತೆ ಸುಳಿಗಾಳಿ ಕಾಣಿಸಿಕೊಂಡಿದೆ. ಸುರಳಿ ಆಕಾರದಲ್ಲಿ ಧೂಳು, ಮುಗಿಲೆತ್ತರಕ್ಕೆ ಚಿಮ್ಮಲು ಪ್ರಾರಂಭಿಸಿದೆ. ಬಳಿಕ ಸುಳಿಗಾಳಿಯ ದೂಳಿನ ಜೊತೆಗೆ ಮೈದಾನದಲ್ಲಿದ್ದ ಕಸ ಗಿಡಗಂಟಿಗಳನ್ನೆಲ್ಲಾ ಹೊತ್ತು ಮೇಲೇರಿದೆ. ಕೆಲ ನಿಮಿಷಗಳ ಕಾಲ ಅತ್ಯಂತ ಕುತೂಹಲದಿಂದ ಜನರು ಇದನ್ನು ನೋಡುತ್ತಾ, ಈ ಅಪರೂಪದ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಕಾರ್ಕಳ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶವಾಗಿದ್ದು ಈ ಭಾಗದಲ್ಲಿ ಈ ಹಿಂದೆಯೂ ಇದೇ ರೀತಿಯ ಸುಳಿಗಾಳಿ ಕಾಣಿಸಿಕೊಂಡಿತ್ತು.
ಕಾರ್ಕಳ ಗಾಂಧಿ ಮೈದಾನದಲ್ಲಿ ಅಪರೂಪದ ಸುಳಿಗಾಳಿ: ದೃಶ್ಯ ಸೆರೆ#Newsfirstkannada #kannadanews #udupi pic.twitter.com/lTdpkpeMNY
— NewsFirst Kannada (@NewsFirstKan) January 28, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post