ಹಾಸನ ಟಿಕೆಟ್ ಫೈಟ್‌ನ ಕೌಟುಂಬಿಕ ಕದನಕ್ಕೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕೊನೆಗೂ ಮೌನ ಮುರಿದಿದ್ದಾರೆ. ಕುಮಾರಸ್ವಾಮಿ, ರೇವಣ್ಣನನ್ನ ಯಾವುದೇ ಕಾರಣಕ್ಕೂ ಬೇರ್ಪಡಿಸಲು ಆಗಲ್ಲ. ಯಾರಾದ್ರು ಬೇರ್ಪಡಿಸುತ್ತೇನೆ ಎಂದು ಕೊಂಡಿದ್ದರೆ ಭ್ರಮನಿರಸನ ಆಗ್ತಾರೆ ಎಂದು ಗುಡುಗಿದ್ದಾರೆ.
ಇದನ್ನೂ ಓದಿ: ನಮ್ಮ ಮಕ್ಕಳ ದಾರಿ ತಪ್ಪಿಸಲು ಶಕುನಿಗಳಿದ್ದಾರೆ -ಸೂರಜ್ ರೇವಣ್ಣ ಟಾಂಟ್ಗೆ HDK ಎಮೋಷನಲ್ ಕಾರ್ಡ್..!
ಚಿಕ್ಕಪ್ಪನ ವಿರುದ್ಧವೇ ಸೂರಜ್ ರೇವಣ್ಣ ತಿರುಗಿಬಿದ್ದ ಹಿನ್ನೆಲೆಯಲ್ಲಿ ಹೆಚ್.ಡಿ.ರೇವಣ್ಣ ಹೊಳೆನರಸೀಪುರದಲ್ಲಿ ತುರ್ತು ಸುದ್ದಿಗೋಷ್ಟಿ ಕರೆದಿದ್ರು. ನಮ್ಮ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರದ ಟಿಕೆಟ್ ಅನ್ನು ದೇವೇಗೌಡರು, ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರೇ ತೀರ್ಮಾನ ಮಾಡ್ತಾರೆ. ನಾನೊಬ್ಬನೇ ತೀರ್ಮಾನ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ‘ಹಾಲಲ್ಲಾದರು ಹಾಕು ನೀರಲ್ಲಾದರು ಹಾಕು’- ಹೀಗ್ಯಾಕೆ ಅಂದ್ರು ಅನಿತಾ ಕುಮಾರಸ್ವಾಮಿ?
ಕಳೆದ ಹತ್ತು ವರ್ಷದಿಂದ ಹಾಸನ ಜಿಲ್ಲೆ ಅಭಿವೃದ್ಧಿ ಆಗಿಲ್ಲ. ಹಾಸನದ ಆಸ್ಪತ್ರೆ ಕುಮಾರಣ್ಣ ಬರದಿದ್ದರೆ ಆಗಲ್ಲ. ನಾನು ಕುಮಾರಸ್ವಾಮಿ ಬಿಟ್ಟು ಮಾಡುವ ಪ್ರಶ್ನೆಯೇ ಇಲ್ಲ. ಕೆಲವರು ಹಾಸನ ಟಿಕೆಟ್ ಅನ್ನ ಭವಾನಿ ಅವರಿಗೆ ಕೊಡಿ ಅಂತಾರೆ. ಕೆಲವರು ಇನ್ನೊಬ್ಬರಿಗೆ ಕೊಡಿ ಅಂತಾರೆ. ಅದನ್ನೆಲ್ಲಾ ಕೂತು ತೀರ್ಮಾನ ಮಾಡೋದು ಪಕ್ಷ. ನಾನಾಗಲಿ, ಸೂರಜ್ ಆಗಲಿ, ಪ್ರಜ್ವಲ್ ಆಗಲಿ ಯಾರೂ ತೀರ್ಮಾನ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೆಚ್.ಡಿ. ರೇವಣ್ಣ ಸ್ಪಷ್ಟಪಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post