ಹಾಸನ: ಹೆಚ್.ಡಿ. ಕುಮಾರಸ್ವಾಮಿ ಮತ್ತು ಹೆಚ್.ಡಿ. ರೇವಣ್ಣ ಹೊಡೆದಾಡುತ್ತಾರೆ ಅಂತಾ ಅಂದುಕೊಂಡಿದ್ರೆ ಅದು ಸಾಧ್ಯವಿಲ್ಲ. ನಾನು ಸಾಯೋವರೆಗೂ ಹೆಚ್‌ಡಿಕೆ ಮತ್ತು ನನ್ನದು ಒಂದೇ ತೀರ್ಮಾನ. ಹೊಡೆದಾಡೋ ಪ್ರಶ್ನೆಯೇ ಇಲ್ಲ. ಹಾಗೇನಾದ್ರು ಅಂದುಕೊಂಡಿದ್ರೆ ನೀವು ಭ್ರಮನಿರಸನರಾಗುತ್ತೀರಿ. ಕುಮಾರಸ್ವಾಮಿ, ರೇವಣ್ಣನನ್ನ ಯಾವುದೇ ಕಾರಣಕ್ಕೂ ಬೇರ್ಪಡಿಸಲು ಆಗಲ್ಲ ಎಂದು ಹೆಚ್.ಡಿ. ರೇವಣ್ಣ ಭಾವುಕರಾಗಿ ಮಾತನಾಡಿದ್ದಾರೆ.
ಇದನ್ನೂ ಓದಿ: ಹಾಸನದಿಂದ ಭವಾನಿ ಸ್ಪರ್ಧೆ ಬಗ್ಗೆ ಸ್ಪಷ್ಟನೆ ಕೊಟ್ಟ ಹೆಚ್.ಡಿ.ರೇವಣ್ಣ
ಹಾಸನ ಜಿಲ್ಲೆಗೆ ಸಂಬಂಧಪಟ್ಟಂತೆ ಎರಡು ರಾಷ್ಟ್ರೀಯ ಪಕ್ಷಗಳು ಅಡ್ಡಗಾಲಾಗಿವೆ. ಯಡಿಯೂರಪ್ಪನವರ ಸರ್ಕಾರ ನಮ್ಮ ಜಿಲ್ಲೆಗೆ ಒಂದು ಬಿಡಿಗಾಸು ಕೊಟ್ಟಿಲ್ಲ. ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗಳಿಗೆ ಅನುದಾನ ಕೊಟ್ಟಿದ್ದು ಕುಮಾರಸ್ವಾಮಿ ನೇತೃತ್ವದ ಸರ್ಕಾರ. ಎರಡು ರಾಷ್ಟ್ರೀಯ ಪಕ್ಷಗಳಿಗೆ ಹೇಳ್ತೀನಿ. ಒಂದು ಕುಟುಂಬದಿಂದ ಒಬ್ಬರೇ ಚುನಾವಣೆಗೆ ನಿಲ್ಲಲಿ ಎಂದು ಕಾನೂನು ಮಾಡಲಿ. ನಾನು ಈಗಲೇ ಸೂರಜ್, ಪ್ರಜ್ವಲ್ ರಾಜೀನಾಮೆ ಕೊಡಿಸುತ್ತೇನೆ ಎಂದು ರೇವಣ್ಣ ಸವಾಲು ಹಾಕಿದ್ದಾರೆ.
ಇದನ್ನೂ ಓದಿ: ‘ಹಾಲಲ್ಲಾದರು ಹಾಕು ನೀರಲ್ಲಾದರು ಹಾಕು’- ಹೀಗ್ಯಾಕೆ ಅಂದ್ರು ಅನಿತಾ ಕುಮಾರಸ್ವಾಮಿ?
ಹಾಸನದ 7 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮವಾಗಿ ತೀರ್ಮಾನ ಮಾಡೋದು ದೇವೇಗೌಡರು, ಕುಮಾರಸ್ವಾಮಿ ಹಾಗೂ ಸಿ.ಎಂ. ಇಬ್ರಾಹಿಂ. ಪ್ರಜ್ವಲ್ ಹೇಳಿದ್ರು ಅಷ್ಟೇ, ರೇವಣ್ಣ ಹೇಳಿದ್ರು ಅಷ್ಟೇ. ದೇವೇಗೌಡರು, ಕುಮಾರಸ್ವಾಮಿ, ಇಬ್ರಾಹಿಂ, ಜಿಲ್ಲೆಯ ಶಾಸಕರು, ಕಾರ್ಯಕರ್ತರ ಜೊತೆ ಚರ್ಚಿಸಿ ತೀರ್ಮಾನ ಮಾಡ್ತಾರೆ. ನಾನೊಬ್ಬನೇ ತೀರ್ಮಾನ ಮಾಡುವ ಪ್ರಶ್ನೆಯೇ ಇಲ್ಲ ಎಂದು ರೇವಣ್ಣ ಹಾಸನ ಟಿಕೆಟ್ ವಿಚಾರದಲ್ಲಿ ಕೇಳಿ ಬಂದಿದ್ದ ಎಲ್ಲಾ ಗೊಂದಲಗಳಿಗೂ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post