ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ಗೃಹಿಣಿ ಸಾವನ್ನಪ್ಪಿರೋ ಘಟನೆ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಧುರಿ (26) ಮೃತ ಗೃಹಿಣಿ.
ಮೃತ ಮಾಧುರಿ 2016ರಲ್ಲಿ ಗುರುಪ್ರಸಾದ್ ಎಂಬಾತನನ್ನ ಮದುವೆಯಾಗಿದ್ದಳು. ಮದುವೆಯಾದ ಬಳಿಕ ಮಾಧುರಿಗೆ ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಹೀಗಾಗಿ ಮನನೊಂದು 26ನೇ ತಾರೀಖಿನಂದು ಕೆಮಿಕಲ್ ಎಕ್ಸ್ಪೆರಿಮೆಂಟ್ಗೆ ತಂದಿದ್ದ ದ್ರವ್ಯದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಕೂಡಲೇ ಮಾಧುರಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾಧುರಿ ಸಾವನ್ನಪ್ಪಿದ್ದಾಳೆ. ಪತಿ ಗುರುಪ್ರಸಾದ್ ಮತ್ತು ಕುಟುಂಬದವರ ವಿರುದ್ಧ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post