ಬೆಂಗಳೂರು: ಹಾಸನ ಟಿಕೆಟ್ ವಿಚಾರಕ್ಕೆ ಯಾರು ತಲೆ ಕೆಡಿಸಿಕೊಂಡಿಲ್ಲ. ಜೆಡಿಎಸ್‌ನಲ್ಲಿ ನಾಯಕತ್ವದ ಬಗ್ಗೆ ವಿವಾದವೇ ಇಲ್ಲ. ಎರಡು ಮೂರು ಕ್ಷೇತ್ರದಲ್ಲಿ ಗೊಂದಲ ಇದೆ ಅಷ್ಟೇ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಒಪ್ಪಿಕೊಂಡಿದ್ದಾರೆ.
ಇದನ್ನೂ ಓದಿ: ಕಾಣದ ಕೈಗಳು ದಿಕ್ಕು ತಪ್ಪಿಸಲು ಪ್ರಯತ್ನಿಸಿದ್ದರೂ ಕಾಣುವ ಬುದ್ದಿ ನಮ್ಮದಾಗಿರಲಿ -HDKಗೆ ಸೂರಜ್ ಮತ್ತೆ ಟಾಂಗ್
ನ್ಯೂಸ್ ಫಸ್ಟ್ ಜೊತೆ ಮಾತನಾಡಿದ ಸಿ.ಎಂ. ಇಬ್ರಾಹಿಂ, ಹಾಸನ ಟಿಕೆಟ್‌ಗಾಗಿ ಸೂರಜ್ ರೇವಣ್ಣ ಕೇಳಿದ್ದು ತಪ್ಪು ಅಂತಾ ಅಲ್ಲ. ಪ್ರತಿಯೊಬ್ಬರಿಗೂ ಆಸೆ ಇದ್ದೆ ಇರುತ್ತೆ. ತನ್ನ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಆದ್ರೆ ಹಾಸನದಲ್ಲಿ ಸ್ಪರ್ಧಿಸಲು ಕ್ಷೇತ್ರದ ಜನ ಇಷ್ಟ ಪಡಬೇಕು. ಅವರಿಗೆ ಗೆಲ್ಲುವ ಅರ್ಹತೆ ಇರಬೇಕು ಎಂದರು.
ಇದನ್ನೂ ಓದಿ: ನಮ್ಮ ಮಕ್ಕಳ ದಾರಿ ತಪ್ಪಿಸಲು ಶಕುನಿಗಳಿದ್ದಾರೆ -ಸೂರಜ್ ರೇವಣ್ಣ ಟಾಂಟ್ಗೆ HDK ಎಮೋಷನಲ್ ಕಾರ್ಡ್..!
ಜೆಡಿಎಸ್ ನಾಯಕತ್ವದ ಬಗ್ಗೆ ಯಾರಾದರೂ ವಿವಾದ ಮಾಡಿದ್ದಾರಾ. ಟಿಕೆಟ್ ವಿಚಾರದಲ್ಲಿ ಕುಮಾರಸ್ವಾಮಿ, ರೇವಣ್ಣ, ಭವಾನಿ ಯಾರೂ ಕೂಡ ತಲೆ ಕೆಡಿಸಿಕೊಂಡಿಲ್ಲ. ಪಕ್ಷದಲ್ಲಿ ಕುಳಿತು ಚರ್ಚೆ ಮಾಡ್ತೀವಿ. ಸಮಯ ಬಂದಾಗ ಪಕ್ಷ ಅಂತಿಮ ತೀರ್ಮಾನ ಕೈಗೊಳ್ಳುತ್ತೆ. ಅಲ್ಲಿವರೆಗೂ ಕಾಯಿರಿ ಅನ್ನೋದು ನನ್ನ ಅಭಿಪ್ರಾಯ ಎಂದು ಇಬ್ರಾಹಿಂ ಹೇಳಿದ್ರು.
ರಾಮನಗರದಲ್ಲಿ ಬೇರೆ ಅರ್ಜಿದಾರರಿಲ್ಲ. ಹೀಗಾಗಿ ಅನಿತಾ ಕುಮಾರಸ್ವಾಮಿ, ನಿಖಿಲ್ ಹೆಸರು ಅನೌನ್ಸ್ ಮಾಡಿದ್ದಾರೆ. ಹಾಸನ ಕ್ಷೇತ್ರದಲ್ಲಿ ಇಬ್ಬರು ಆಕಾಂಕ್ಷಿಗಳಿದ್ದಾರೆ. ಇದನ್ನ ಪಕ್ಷ ತೀರ್ಮಾನ ಮಾಡುತ್ತೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post