ಕೇಂದ್ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ಅನುದಾನ ಘೋಷಿಸಿರುವುದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ್ದಾರೆ.
2023-24ನೇ ಸಾಲಿನ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ ಆದ್ಯತೆ ನೀಡಿದ್ದಾರೆ. ಈ ಸಾಲಿನ ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಪ್ರಮುಖ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ರೂ 5300 ಕೋಟಿ ಅನುದಾನ ಘೋಷಿಸಲಾಗಿದೆ. ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ ಹಾಗೂ ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಮಸ್ತ ಕರ್ನಾಟಕದ ಪರವಾಗಿ ಧನ್ಯವಾದಗಳು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post