ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ CD ಸಮರ ಸಾರಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಹಿಂದೆ ದುಂಬಾಲು ಬಿದ್ದಿದ್ದಾರೆ. ಬೊಮ್ಮಾಯಿ ಅವರನ್ನ ಬಿಡದೇ ಅವರ ಹಿಂದೆಯೇ ಓಡೋಡಿ ಹೋಗಿ ಕಾರು ಹತ್ತಿ ತೆರಳಿದ್ದಾರೆ.
ಇದನ್ನೂ ಓದಿ: ನನ್ನ-ಡಿಕೆಎಸ್ ಸಂಬಂಧ ಹಾಳಾಗಲು ಕಾರಣ ಗ್ರಾಮೀಣ ಶಾಸಕಿ -ಜಾರಕಿಹೊಳಿ ಬಾಂಬ್
ಇಂದು ಬೆಳಗ್ಗೆಯೇ ಸಿಎಂ ಬಸವರಾಜ ಬೊಮ್ಮಾಯಿ ಅವರ RT ನಗರದ ಖಾಸಗಿ ನಿವಾಸಕ್ಕೆ ರಮೇಶ್ ಜಾರಕಿಹೊಳಿ ಭೇಟಿ ಕೊಟ್ಟಿದ್ದರು. ಈ ವೇಳೆ CD ಪ್ರಕರಣದ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದಾದ ಬಳಿಕ RT ನಗರದ ನಿವಾಸದಿಂದ ಸಿಎಂ ಬಸವರಾಜ ಬೊಮ್ಮಾಯಿ ಹೊರಡುತ್ತಿದ್ದರು. ಆಗ ಬಸವರಾಜ ಬೊಮ್ಮಾಯಿ ಅವರನ್ನು ಬಿಡದ ರಮೇಶ್ ಜಾರಕಿಹೊಳಿ ಅವರ ಹಿಂದೆಯೇ ಓಡೋಡಿ ಸಿಎಂ ಕಾರು ಹತ್ತಿದ್ದಾರೆ.
ಸಿಎಂ ಜೊತೆಗೆ ಕಾರಿನಲ್ಲಿ ತೆರಳಿರುವ ರಮೇಶ್ ಜಾರಕಿಹೊಳಿ ಅವರ ನಡೆ ಕುತೂಹಲ ಕೆರಳಿಸಿದೆ. ವಿಧಾನಸಭಾ ಚುನಾವಣೆಗೂ ಮುನ್ನ CD ಪ್ರಕರಣವನ್ನು ಶತಾಯಗತಾಯ ಸಿಬಿಐಗೆ ವರ್ಗಾಯಿಸಲು ರಮೇಶ್ ಜಾರಕಿಹೊಳಿ ದುಂಬಾಲು ಬಿದ್ದಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಹಾಳಾಗಲು D.K.ಶಿವಕುಮಾರ್ ಮತ್ತು ವಿಷಕನ್ಯೆ ಕಾರಣ -ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕಳೆದ ಜನವರಿ 30ರಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿಯಲ್ಲಿ ತುರ್ತು ಸುದ್ದಿಗೋಷ್ಠಿ ಕರೆದಿದ್ರು. ಬೆಳಗಾವಿಯಲ್ಲಿ CD ಆಡಿಯೋ ರಿಲೀಸ್ ಮಾಡಿದ ರಮೇಶ್ ಜಾರಕಿಹೊಳಿ ಇದೀಗ ಬೆಂಗಳೂರಿನಲ್ಲೇ ಬೀಡು ಬಿಟ್ಟಿದ್ದಾರೆ. CD ಪ್ರಕರಣವನ್ನ ಸಿಬಿಐ ತನಿಖೆಗೆ ವರ್ಗಾಯಿಸುವಂತೆ ರಮೇಶ್ ಜಾರಕಿಹೊಳಿ ಸಿಎಂ ಬಸವರಾಜ ಬೊಮ್ಮಾಯಿ ಮೇಲೆ ಒತ್ತಡ ಹೇರುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post