ರಾಯಚೂರು: 2023 ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ದಿನಗಣನೆ ಶುರುವಾಗಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ಗೆ ಪೈಪೋಟಿ ನೀಡಲು ಮಾಜಿ ಸಚಿವ ಜನಾರ್ದನ್ ರೆಡ್ಡಿ ಸಜ್ಜಾಗಿದ್ದಾರೆ. ಹೀಗಾಗಿ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಎಂಬ ಹೊಸ ಪಾರ್ಟಿಯೊಂದು ಶುರು ಮಾಡಿದ್ದಾರೆ.
ಇತ್ತೀಚೆಗೆ ತನ್ನ ಸೋದರ ಸೋಮಶೇಖರ್ ರೆಡ್ಡಿ ಪ್ರತಿನಿಧಿಸುವ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದಲೇ ಹೆಂಡತಿಯನ್ನು ಕಣಕ್ಕಿಳಿಸುವುದಾಗಿ ಘೋಷಿಸಿ ಜನಾರ್ದನ್ ರೆಡ್ಡಿ ಅಚ್ಚರಿ ಮೂಡಿಸಿದ್ದರು. ಈ ಬೆನ್ನಲ್ಲೀಗ ಮಗಳಿಗಾಗಿ ಕ್ಷೇತ್ರ ಹುಡುಕಾಟಕ್ಕೆ ರೆಡ್ಡಿ ಮುಂದಾಗಿದ್ದಾರೆ.
ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಹೆಂಡತಿ ಅರುಣಾಲಕ್ಷ್ಮೀ ಸ್ಪರ್ಧೆಗೆ ಸಿದ್ಧರಾಗಿದ್ದಾರೆ. ಜತೆಗೆ ಖುದ್ದು ಜನಾರ್ದನ್ ರೆಡ್ಡಿಯವರೇ ತಾನು ಗಂಗಾವತಿ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.
ಈಗಾಗಲೇ ರಾಯಚೂರಿನ ಸಿಂಧನೂರು ವಿಧಾನಸಭಾ ಕ್ಷೇತ್ರದಿಂದ ಮಗಳು ಬ್ರಾಹ್ಮಣಿಯನ್ನು ಕಣಕ್ಕಿಳಿಸಲು ಚಿಂತಿಸಿದ್ದಾರೆ. ಹೀಗಾಗಿ ಕ್ಷೇತ್ರದ ಜನರ ನಾಡಿ ಮಿಡಿತ ಅರಿಯುವ ಕಾಯಕದಲ್ಲಿ ತೊಡಗಿದ್ದಾರೆ. ಎಲ್ಲವೂ ಸರಿ ಆದಲ್ಲಿ ಸಿಂಧನೂರಿನಿಂದಲೇ ಮಗಳು ಸ್ಪರ್ಧಿಸೋದು ಪಕ್ಕಾ ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post