ಬಳ್ಳಾರಿ: ಶೌಚಾಲಯಕ್ಕೆ ತೆರಳಿದ್ದ ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ನೀರು ಪಾಲಾಗಿರುವ ಘಟನೆ ಕುರುಗೋಡು ತಾಲೂಕಿನ ಗುತ್ತಿಗನೂರು ಗ್ರಾಮದಲ್ಲಿ ನಡೆದಿದೆ.
ಗುತ್ತಿಗನೂರು ಗ್ರಾಮದ ಚೌಡಿಕಿ ಕುಟುಂಬಕ್ಕೆ ಸೇರಿದ ಮಣಿಕಂಠ (14), ಹರ್ಷವರ್ಧನ (9) ಮೃತ ದುರ್ದೈವಿಗಳು. ಅಂಬಾದೇವಿ ಜಾತ್ರೆಗೆಂದು ಪೋಷಕರ ಜೊತೆ ಮಣಿಕಂಠ, ಹರ್ಷವರ್ಧನ ಹಾಗೂ ಇನ್ನೊಂದು ಮಗು ಗ್ರಾಮಕ್ಕೆ ಆಗಮಿಸಿದ್ದರು.
ಜಾತ್ರೆಯಲ್ಲಿ ತಿರುಗಾಡಿದ್ದ ಮಕ್ಕಳು ಶೌಚಕ್ಕೆಂದು ತೆರಳಿದ್ದರು. ಈ ವೇಳೆ ನೀರಿಗೆ ಬಿದ್ದ ಇಬ್ಬರು ಮಕ್ಕಳು ಈಜಲು ಬಾರದೇ ನೀರು ಕುಡಿದು ಮೃತಪಟ್ಟಿದ್ದಾರೆ. ಇನ್ನು ಮಕ್ಕಳನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಅದೃಷ್ಟವಶಾತ್ ಇನ್ನೊಂದು ಮಗು ಬದುಕುಳಿದಿದೆ. ಕುರುಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post