ಮೈಸೂರು: ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್. ಧ್ರುವನಾರಾಯಣ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 61 ವರ್ಷದ ಹಿರಿಯ ರಾಜಕಾರಣಿ ಧ್ರುವನಾರಾಯಣ್ ಅವರನ್ನು ಹಠಾತ್ ಹೃದಯಾಘಾತ ಸಂಭವಿಸಿದ ಕೂಡಲೇ ಮೈಸೂರಿನ ಡಿಆರ್ಎಂಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೀಗ, ಇವರು ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.
ಈಗ ಕೆಪಿಸಿಸಿ ಕಾರ್ಯಾಧ್ಯಕ್ಷರ ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ತನ್ನ ಆಪ್ತನ ಅಂತಿಮ ದರ್ಶನಕ್ಕೆ ಆಗಮಿಸಿದ್ದರು. ಧ್ರುವನಾರಾಯಣ್ ಮೃತದೇಹ ನೋಡಿ ಮೌನವಾಗಿ ನಿಂತ ಸಿದ್ದರಾಮಯ್ಯ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಇನ್ನು, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಧ್ರುವನಾರಾಯಣ್ ಅವರ ಪತ್ನಿ ವೀಣಾ ಅವರಿಗೆ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಧ್ರುವನಾರಾಯಣ್ ಅವರ ಅಂತಿಮ ದರ್ಶನಕ್ಕೆ ಗಣ್ಯರು, ಅಭಿಮಾನಿಗಳ ದಂಡೇ ಮೈಸೂರಿನತ್ತ ಹರಿದು ಬರ್ತಿದೆ. ಹೀಗಿರುವಾಗಲೇ ಮೈಸೂರಿನ ನಿವಾಸದಿಂದ ಧ್ರುವನಾರಾಯಣ್ ಪಾರ್ಥಿವ ಶರೀರವನ್ನು ಕೆಪಿಸಿಸಿ ಕಚೇರಿಗೆ ಶಿಫ್ಟ್ ಮಾಡಲಾಗುತ್ತಿದೆ.
ಅಭಿಮಾನಿಗಳಿಂದ ಗಲಾಟೆ..?
ಧ್ರುವನಾರಾಯಣ್ ಪಾರ್ಥಿವ ಶರೀರವನ್ನು ಶಿಫ್ಟ್ ಮಾಡಲು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿದ್ದಕ್ಕೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ನಾವು ಪಾರ್ಥಿವ ಶರೀರ ಸಣ್ಣ ವಾಹನದಲ್ಲಿ ಸಾಗಿಸಲು ಅವಕಾಶ ಮಾಡಿಕೊಡಲ್ಲ. ನೀವ್ಯಾರು ಮೃತದೇಹ ಮುಟ್ಟಬೇಡಿ ಎಂದು ಗಲಾಟೆ ಮಾಡಿದ್ದಾರೆ.
ನಮ್ಮ ನಾಯಕರ ಅಂತಿಮ ದರ್ಶನಕ್ಕೆ ಅಭಿಮಾನಿಗಳು ಬರುತ್ತಲೇ ಇದ್ದಾರೆ. ಹೀಗಾಗಿ ಎಲ್ಲಾ ಅಭಿಮಾನಿಗಳಿಗೂ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಿ. ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿ ಎಂದು ಧ್ರುವನಾರಾಯಣ್ ಅಭಿಮಾನಿಗಳು ಆಗ್ರಹಿಸಿದ್ದಾರೆ.
ಇವರ ನಿಧನಕ್ಕೆ ರಾಹುಲ್ ಗಾಂಧಿ, ಸಿಎಂ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ, ಎಚ್.ಡಿ ಕುಮಾರಸ್ವಾಮಿ, ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಸೇರಿದಂತೆ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post