ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ಗೆ ಕಾಂಗ್ರೆಸ್ ಹಿರಿಯ ನಾಯಕರು ಅಂತಿಮ ನಮನ ಸಲ್ಲಿಸುತ್ತಿದ್ದಂತೆ ಅವರ ಹಿರಿಯ ಪುತ್ರ ದರ್ಶನ್ಗೆ ಟಿಕೆಟ್ ಘೋಷಣೆ ಮಾಡುವಂತೆ ಪಟ್ಟು ಹಿಡಿಯಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣ್ದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಧ್ರುವನಾರಾಯಣ್ ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತಿದ್ದರು. ಈ ವೇಳೆ ಧ್ರುವನಾರಾಯಣ್ ಅಭಿಮಾನಿಗಳು ಇವತ್ತೇ ನಂಜನಗೂಡು ಟಿಕೆಟ್ ಘೋಷಣೆ ಮಾಡುವಂತೆ ಪಟ್ಟು ಹಿಡಿದರು. ಧ್ರುವನಾರಾಯಣ್ ಹಿರಿಯ ಪುತ್ರ ದರ್ಶನ್ಗೆ ಟಿಕೆಟ್ ನೀಡಿ ಎಂದು ಸುರ್ಜೇವಾಲ, ಡಿಕೆ ಶಿವಕುಮಾರ್, ಸಿದ್ದರಾಮಯ್ಯಗೆ ಧ್ರುವನಾರಾಯಣ್ ಅಭಿಮಾನಿಗಳು ಆಗ್ರಹಿಸಿದ್ದಾರೆ.
ಧ್ರುವನಾರಾಯಣ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಹೊರ ಬರುತ್ತಿದ್ದಂತೆ ಅಭಿಮಾನಿಗಳು ದರ್ಶನ್, ದರ್ಶನ್ ಎಂದು ಕೂಗಿದರು. ಧ್ರುವನಾರಾಯಣ್ ನಿವಾಸದ ಮುಂದೆಯೇ ಟಿಕೆಟ್ ಘೋಷಣೆ ಮಾಡಿ ಎಂದು ಒತ್ತಾಯಿಸಿದರು. ಧ್ರುವನಾರಾಯಣ್ ಪುತ್ರನಿಗೆ ಟಿಕೆಟ್ ನೀಡಿ. ಇಂದೇ ನಂಜನಗೂಡು ಟಿಕೆಟ್ ಘೋಷಣೆ ಮಾಡುವಂತೆ ಅಭಿಮಾನಿಗಳು ಆಗ್ರಹಿಸಿದರು. ಕೂಗಾಟದ ಮಧ್ಯೆ ಸಂಸದ ಡಿ.ಕೆ ಸುರೇಶ್ ಎಐಸಿಸಿ ಅಧ್ಯಕ್ಷರ ಗಮನಕ್ಕೆ ತಂದು ಟಿಕೆಟ್ ಕೊಡಿಸೋಣ ಎಂದು ಸಮಾಧಾನ ಪಡಿಸಲು ಪ್ರಯತ್ನಿಸಿದರು. ಆದರೂ ಧ್ರುವನಾರಾಯಣ್ ಅಭಿಮಾನಿಗಳು ಇಂದೇ ಟಿಕೆಟ್ ಘೋಷಣೆ ಮಾಡಿ ಎಂದು ಒತ್ತಾಯಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post