ಎನ್1 ಕ್ರಿಕೆಟ್ ಅಕಾಡೆಮಿ ಸುನೀಲ್ ಕುಮಾರ್. ಬಿ.ಆರ್ ಸಾರಥ್ಯದ ಕಿರುತೆರೆ ತಾರೆಯರ ಟೆಲಿವಿಷನ್ ಪ್ರೀಮಿಯರ್ ಲೀಗ್ಗೆ ಅದ್ಧೂರಿ ತೆರೆ ಬಿದ್ದಿದೆ. ಹರ್ಷ ಸಿ.ಎಂ ಗೌಡ ನೇತೃತ್ವದ ಎನಿಎಲ್ಪ್ ಟೂರ್ನಿವಲ್ ತಂಡ ಟಿಪಿಎಲ್ ಸೀಸನ್ -2 ಟ್ರೋಪಿ ಮುಡಿಗೇರಿಸಿಕೊಂಡಿದೆ. ಎನ್ 1 ಕ್ರಿಕೆಟ್ ಅಕಾಡೆಮಿ ಸುನೀಲ್ ಕುಮಾರ್ ಬಿ.ಆರ್ ಕಳೆದ ವರ್ಷದಿಂದ ಕಿರುತೆರೆ ತಾರೆಯರ ಟೆಲಿವಿಷನ್ ಪ್ರೀಮಿಯರ್ ಲೀಗ್ ಆರಂಭಿಸಿದ್ದಾರೆ.
ಇದನ್ನು ಓದಿ: ಸ್ಟಾರ್ ನಿರ್ಮಾಪಕ ಉಮಾಪತಿ ಕೊಲೆಗೆ ಸಂಚು ರೂಪಿಸಿದ್ದ ರೌಡಿ ಅರೆಸ್ಟ್
ಈ ಬಾರಿ ಎರಡನೇ ಸೀಸನ್ ಮಾರ್ಚ್ 12ರಿಂದ ಆರಂಭವಾಗಿತ್ತು. ಮಾರ್ಚ್ 12 ರಿಂದ 15ರವರೆಗೆ ನಾಲ್ಕು ದಿನಗಳ ಕಾಲ ಕ್ರಿಕೆಟ್ ಪಂದ್ಯಾವಳಿ ನಡೆದಿದ್ದು, ಅಂತಿಮವಾಗಿ ಹರ್ಷ ಸಿಎಂ ಗೌಡ ನೇತೃತ್ವದ ಎನಿಎಲ್ಪ್ ಟೂರ್ನಿವಲ್ ತಂಡ ಟಿಪಿಎಲ್ ಸೀಸನ್ -2 ಟ್ರೋಫಿಗೆ ಮುತ್ತಿಟ್ಟಿದೆ. ಮಂಜು ಪಾವಗಡ ನೇತೃತ್ವದ ಅಶ್ವ ಸೂರ್ಯ ರಿಯಾಲಿಟೀಸ್ ರನ್ನರ್ ಅಪ್ ಸ್ಥಾನ ಪಡೆದುಕೊಂಡಿದೆ. ಗಾಯಕ ವ್ಯಾಸರಾಜ್ ಮ್ಯಾನ್ ಆಫ್ ದಿ ಸೀರೀಸ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ದಿ ಪರ್ಪಲ್ ರಾಕ್ ಪ್ಯಾಂಥರ್ಸ್, ಅಶ್ವಸೂರ್ಯ ರಿಯಾಲಿಟೀಸ್, ಎನಿಎಲ್ಪ್ ಟೂರ್ನಿವಲ್, ಇನ್ಸೇನ್ ಕ್ರಿಕೆಟ್ ಟೀಂ, ದಿ ಬುಲ್ ಸ್ಕ್ವಾಡ್, ಆಕ್ಸ್ ಫರ್ಡ್ ವಿನ್ ಟೀಂ ಎಂಬ ಒಟ್ಟು ಆರು ತಂಡಗಳು ಟಿಪಿಎಲ್ ಸೀಸನ್-2ನಲ್ಲಿ ಭಾಗವಹಿಸಿದ್ದವು. ಲೂಸ್ ಮಾದ ಯೋಗಿ, ಮಂಜು ಪಾವಗಡ, ಹರ್ಷ ಸಿ.ಎಂ ಗೌಡ, ರವಿಶಂಕರ್ ಗೌಡ, ಶರತ್ ಪದ್ಮನಾಭ್, ಸಾಗರ್ ಬಿಳಿಗೌಡ ನಾಯಕತ್ವದಲ್ಲಿ ತಂಡಗಳನ್ನು ಮುನ್ನಡೆಸಲಾಗಿತ್ತು.
View this post on Instagram
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post