ವಿಜಯಪುರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅನಾಹುತವೊಂದು ತಪ್ಪಿದೆ. ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗಾಳಿಯ ರಭಸಕ್ಕೆ ಬ್ಯಾರಿಕೇಡ್‌ಗಳು ಧರೆಗುರುಳಿವೆ. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದಂತೆ ಬ್ಯಾರಿಕೇಡ್ ಎತ್ತಿ ಸರಿಪಡಿಸಿದ್ದಾರೆ.
ಇದನ್ನೂ ಓದಿ: ಯಡಿಯೂರಪ್ಪ ಇದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪ; ಸ್ವಲ್ಪದರಲ್ಲೇ ತಪ್ಪಿದೆ ಅನಾಹುತ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹುಬ್ಬಳ್ಳಿಯಿಂದ ವಿಜಯಪುರಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದರು. ವಿಜಯಪುರ ನಗರದ ಸೈನಿಕ ಶಾಲೆ ಹೆಲಿಪ್ಯಾಡ್‌ನಲ್ಲಿ ಈ ಘಟನೆ ನಡೆದಿದೆ. ಹೆಲಿಕಾಪ್ಟರ್ ಲ್ಯಾಂಡಿಂಗಾಗಿ ಹೆಲಿಪ್ಯಾಡ್ ಸುತ್ತ ಬ್ಯಾರಿಕೇಡ್ ಹಾಕಲಾಗಿತ್ತು. ಆ ಬ್ಯಾರಿಕೇಡ್‌ಗಳು ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗಾಳಿಯ ರಭಸಕ್ಕೆ ಧರೆಗುರುಳಿವೆ. ಸ್ಥಳದಲ್ಲಿದ್ದ ಪೊಲೀಸರು ಚೆಲ್ಲಾಪಿಲ್ಲಿಯಾದ ಬ್ಯಾರಿಕೇಡ್‌ಗಳನ್ನ ಸರಿಪಡಿಸಲು ಮುಂದಾಗಿದ್ದಾರೆ.
ವಿಜಯಪುರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅನಾಹುತವೊಂದು ತಪ್ಪಿದೆ. ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗಾಳಿಯ ರಭಸಕ್ಕೆ ಬ್ಯಾರಿಕೇಡ್‌ಗಳು ಧರೆಗುರುಳಿವೆ. #newsfirstlive #newsfirstkannada #prahladjoshi #vijayapura pic.twitter.com/TBsE36Rau5
— NewsFirst Kannada (@NewsFirstKan) March 18, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post