ಬೆಂಗಳೂರು: ಕನ್ನಡ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ನಿಧನರಾಗಿದ್ದಾರೆ. ಪ್ರಸಾದ್ ಹೆಗಡೆ ಮೂಲತಹ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಚವತ್ತಿ ಸಮೀಪದವರಾಗಿದ್ದರು.
ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಪ್ರಸಾದ್ ಹೆಗಡೆ ಇಂದು ಬೆಳಗಿನ ಜಾವ 4:30ಕ್ಕೆ ಕೊನೆಯುಸಿರೆಳೆದಿದ್ದಾರೆ. ಪ್ರಸ್ತುತ RAJNEWSನಲ್ಲಿ ಔಟ್ ಪುಟ್ ಚೀಫ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹಲವು ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿದ್ದ ಪ್ರಸಾದ್ ಹೆಗಡೆ, ಮಾಧ್ಯಮ ಲೋಕದಲ್ಲಿ ಅಪಾರ ಅನುಭವ ಹೊಂದಿದ್ದರು.
ಪ್ರಸಾದ್ ಹೆಗಡೆ ನಿಧನದಿಂದ ಅವರ ಕುಟುಂಬಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಹೆಗಡೆ ಅವರ ಅಗಲಿಕೆಗೆ ಮಾಧ್ಯಮ ಲೋಕದ ಗಣ್ಯರು ಕಂಬನಿ ಮಿಡಿದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post