ದೇವನಹಳ್ಳಿ: ಪ್ರಯಾಣಿಕನೊಬ್ಬ ವಿಮಾನದ ಶೌಚಾಲಯದಲ್ಲಿ ಸಿಗರೇಟ್ ಸೇದಿ ಆತಂಕ ಸೃಷ್ಟಿಸಿರೋ ಘಟನೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಅಸ್ಸಾಂನಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕನೋರ್ವ ಧೂಮಪಾನ ಮಾಡಿದ್ದಾನೆ. ಇದರಿಂದ ವಿಮಾನದ ಒಳಗಿದ್ದ ಪ್ರಯಾಣಿಕರು ಆತಂಕಗೊಂಡಿದ್ದರು. ಈ ಘಟನೆಯು ಮಧ್ಯರಾತ್ರಿ 1:30ರ ಸುಮಾರಿಗೆ ನಡೆದಿದೆ.
ಸಿಗರೇಟ್ ಸೇದಿದ ಭೂಪ ಅಸ್ಸಾಂ ಮೂಲದ ಶೇಹರಿ ಚೌಧರಿ ಎಂಬಾತ. ವಿಮಾನದೊಳಗೆ ರೆಸ್ಟ್ ರೂಮ್ನಿಂದ ಸಿಗರೇಟ್ ಹೊಗೆ ಬಂದಾಗ ಪರಿಶೀಲಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಈತ ಬೆಂಗಳೂರಿನ ಏರ್ಪೋರ್ಟ್ಗೆ ಬಂದ ಕೂಡಲೇ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post